ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Akash-NG Missile: ಹೊಸ ತಲೆಮಾರಿನ ಆಕಾಶ್-ಎನ್‌ಜಿ ಕ್ಷಿಪಣಿ ಯಶಸ್ವಿ ಪ್ರಯೋಗ

Published 12 ಜನವರಿ 2024, 10:51 IST
Last Updated 12 ಜನವರಿ 2024, 10:51 IST
ಅಕ್ಷರ ಗಾತ್ರ

ಬಾಲಸೋರ್ (ಒಡಿಶಾ): ಹೊಸ ತಲೆಮಾರಿನ ಆಕಾಶ್-ಎನ್‌ಜಿ ಕ್ಷಿಪಣಿಯನ್ನು ಶುಕ್ರವಾರ ಇಲ್ಲಿನ ಕರಾವಳಿಯಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಚಾಂದಿಪುರದ ಸಮಗ್ರ ಪರೀಕ್ಷಾ ಕೇಂದ್ರದಲ್ಲಿ (ಐಟಿಆರ್), ಆಕಾಶ್-ಎನ್‌ಜಿ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಲಾಗಿದ್ದು, ದೇಶದ ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಉತ್ತೇಜನ ದೊರಕಿದೆ.

ಕಡಿಮೆ ಎತ್ತರದಲ್ಲಿ ಅತಿ ವೇಗದ ಮಾನವರಹಿತ ವೈಮಾನಿಕ ಗುರಿಯನ್ನು ಯಶಸ್ವಿಯಾಗಿ ತಡೆದು ನಾಶಪಡಿಸಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಆಕಾಶ್-ಎನ್‌ಜಿ 80 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಶತ್ರುರಾಷ್ಟ್ರಗಳ ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆಯನ್ನು ಹೊಂದಿದೆ.

ದೇಶೀಯವಾಗಿ ಅಭಿವೃದ್ಧಿಪಡಿಸಿದ ರೇಡಿಯೊ ಫ್ರೀಕ್ವೆನ್ಸಿ ಅನ್ವೇಷಕ, ಲಾಂಚರ್, ಮಲ್ಟಿ-ಫಂಕ್ಷನ್ ರಾಡಾರ್ ಹಾಗೂ ಕಮಾಂಡ್, ಕಂಟ್ರೋಲ್, ಕಮ್ಯುನಿಕೇಷನ್ ಸಿಸ್ಟಂ ಸೇರಿದಂತೆ ಸಮಗ್ರ ವೆಪನ್ ಸಿಸ್ಟಂ ಅನ್ನು ಹೊಂದಿದೆ.

ಭಾರತೀಯ ವಾಯುಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಅಧಿಕಾರಿಗಳ ಸಮ್ಮುಖದಲ್ಲಿ ಈ ಪರೀಕ್ಷಾರ್ಥ ಉಡಾವಣೆಯನ್ನು ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT