ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

Published 18 ಏಪ್ರಿಲ್ 2024, 14:15 IST
Last Updated 18 ಏಪ್ರಿಲ್ 2024, 14:15 IST
ಅಕ್ಷರ ಗಾತ್ರ

ಬಾಲೇಶ್ವರ(ಒಡಿಶಾ): ‘ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿ’ಯ(ಐಟಿಸಿಎಂ) ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾದ ಕರಾವಳಿಯಲ್ಲಿ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್‌ಡಿಒ) ಗುರುವಾರ ತಿಳಿಸಿದೆ.

‘ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ನಿರೀಕ್ಷೆಯಂತೆ, ಕ್ಷಿಪಣಿಯ ಎಲ್ಲ ವ್ಯವಸ್ಥೆಗಳ ಕಾರ್ಯವು ಸಮರ್ಪಕವಾಗಿ ಇರುವುದು ಕಂಡುಬಂತು’ ಎಂದು ತಿಳಿಸಿದೆ.

‘ಬೆಂಗಳೂರು ಮೂಲದ ಗ್ಯಾಸ್‌ ಟರ್ಬೈನ್ ರಿಸರ್ಚ್‌ ಎಸ್ಟಾಬ್ಲಿಷ್‌ಮೆಂಟ್‌(ಜಿಟಿಆರ್‌ಇ) ಅಭಿವೃದ್ಧಿಪಡಿಸಿರುವ ಪ್ರೊಪಲ್ಷನ್ ವ್ಯವಸ್ಥೆಯನ್ನು ಈ ಕ್ಷಿಪಣಿಯಲ್ಲಿ ಅಳವಡಿಸಲಾಗಿದೆ. ಪ್ರೊಪಲ್ಷನ್‌ ವ್ಯವಸ್ಥೆಯ ಕಾರ್ಯವನ್ನು ಸಹ ಈ ಪರೀಕ್ಷೆ ದೃಢೀಕರಿಸಿದೆ’ ಎಂದು ಡಿಆರ್‌ಡಿಒ ತಿಳಿಸಿದೆ.

ಇಡೀ ಕ್ಷಿಪಣಿ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿರುವ ಡಿಆರ್‌ಡಿಒ ಅಂಗಸಂಸ್ಥೆಯಾದ ಏರೋನಾಟಿಕಲ್ ಡೆವಲೆಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ (ಎಡಿಇ) ಅಭಿವೃದ್ಧಿಪಡಿಸಿದೆ. ಇತರ ಪ್ರಯೋಗಾಲಯಗಳು ಮತ್ತು ಉದ್ದಿಮೆಗಳು ಸಹ ಈ ಕಾರ್ಯದಲ್ಲಿ ಕೈಜೋಡಿಸಿವೆ.

‘ರಾಡಾರ್‌, ಇಒಟಿಎಸ್‌ ಹಾಗೂ ಟೆಲಿಮೆಟ್ರಿಯಂತಹ ಸಂವೇದಕಗಳ ಮೂಲಕ ಈ ಕ್ಷಿಪಣಿ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲಾಗಿತ್ತು. ಈ ಸಂವೇದಕಗಳಲ್ಲದೇ, ಸುಖೋಯ್‌–30–ಎಂಕೆಐ ಯುದ್ಧವಿಮಾನದ ಮೂಲಕವೂ ಮೇಲ್ವಿಚಾರಣೆ ನಡೆಸಲಾಯಿತು’ ಎಂದು ತಿಳಿಸಿದೆ. 

ರಾಜನಾಥ್‌ ಸಿಂಗ್‌ ಅಭಿನಂದನೆ: ಐಟಿಸಿಎಂಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿರುವುದಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಡಿಆರ್‌ಡಿಒ ಅನ್ನು ಅಭಿನಂದಿಸಿದ್ದಾರೆ

‘ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿ’(ಐಟಿಸಿಎಂ)ಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಡಿಆರ್‌ಡಿಒ ಗುರುವಾರ ಯಶಸ್ವಿಯಾಗಿ ನೆರವೇರಿಸಿತು

‘ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿ’(ಐಟಿಸಿಎಂ)ಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಡಿಆರ್‌ಡಿಒ ಗುರುವಾರ ಯಶಸ್ವಿಯಾಗಿ ನೆರವೇರಿಸಿತು

–ಪಿಟಿಐ ಚಿತ್ರ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT