ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ–4 ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ವ್ಯವಸ್ಥೆಗೆ ಇನ್ನಷ್ಟು ಬಲ

Last Updated 6 ಜೂನ್ 2022, 15:44 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ಮಧ್ಯಂತರ ಶ್ರೇಣಿಯ ಕ್ಷಿಪಣಿ 'ಅಗ್ನಿ–4' ಪರೀಕ್ಷೆಯನ್ನು ಒಡಿಶಾದ ಎಪಿಜೆ ಅಬ್ದುಲ್‌ ಕಲಾಂ ದ್ವೀಪದಲ್ಲಿ ಸೋಮವಾರ ಯಶಸ್ವಿಯಾಗಿ ನಡೆಸಿದೆ.

ಇದು ದೇಶದ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಮಹತ್ವದ ಸಂಗತಿ ಎನ್ನಲಾಗಿದ್ದು,ಈ ಸಂಬಂಧ ರಕ್ಷಣಾ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ. ರಾತ್ರಿ 7.30ಕ್ಕೆ ಪರೀಕ್ಷೆ ನಡೆಸಲಾಯಿತು ಎಂದು ತಿಳಿಸಿದೆ.

ಎದುರಾಳಿಗಳ ಆಕ್ರಮಣವನ್ನು ತಡೆಯುವ ಸಾಮರ್ಥ್ಯವನ್ನು ಭಾರತವು ಹೊಂದಿದೆ ಎಂಬುದನ್ನು ಈ ಪರೀಕ್ಷೆಯು ಸಾಬೀತು ಮಾಡುತ್ತದೆ ಎಂದೂ ಹೇಳಿದೆ.

ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೊಯ್ಯಬಲ್ಲ ಹಾಗೂ 4,000 ಕಿ.ಮೀ. ದೂರದ ಗುರಿ ತಲುಪಬಲ್ಲ ಸಾಮರ್ಥ್ಯವನ್ನು ಈ ಕ್ಷಿಪಣಿ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT