ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನಡಾದಲ್ಲಿ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

Published 21 ಸೆಪ್ಟೆಂಬರ್ 2023, 7:35 IST
Last Updated 21 ಸೆಪ್ಟೆಂಬರ್ 2023, 7:35 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ವೀಸಾ ಸೇವೆಯು ಕೆನಡಾ ಪ್ರಜೆಗಳಿಗೆ ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಕೆನಡಾ ಪ್ರಜೆಗಳ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆ ನಡೆಸುವ ಖಾಸಗಿ ಏಜೆನ್ಸಿ 'ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌' ತನ್ನ ವೆಬ್‌ಸೈಟ್‌ನಲ್ಲಿ ಭಾರತೀಯ ವೀಸಾ ಸೇವೆಯನ್ನು 'ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ' ಎಂದು ತಿಳಿಸಿದೆ.

ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಹೇಳಿಕೆ ನೀಡಿದ್ದರು. ಇದರಿಂದಾಗಿ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ನಡುವೆಯೇ ವೀಸಾ ಸ್ಥಗಿತ ಕ್ರಮ ಕೈಗೊಳ್ಳಲಾಗಿದೆ.

ನಿಜ್ಜರ್‌ ಹತ್ಯೆ ವಿಚಾರವಾಗಿ ಉಭಯ ರಾಷ್ಟ್ರಗಳು ರಾಯಭಾರಿಗಳನ್ನು ಉಚ್ಚಾಟಿಸಿವೆ.

ಟ್ರುಡೊ ಹೇಳಿಕೆಯನ್ನು ತಿರಸ್ಕರಿಸಿರುವ ಭಾರತ ತಿರಸ್ಕರಿಸಿದ್ದು, 'ಇದು ಅಸಂಬದ್ಧ ಮತ್ತು ಅರ್ಥಹೀನ' ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT