ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯುತ್‌ ಆಮದು: ಭಾರತ–ನೇಪಾಳ ಒಪ್ಪಂದ

Published 4 ಜನವರಿ 2024, 15:48 IST
Last Updated 4 ಜನವರಿ 2024, 15:48 IST
ಅಕ್ಷರ ಗಾತ್ರ

ಕಠ್ಮಂಡು: ಮುಂದಿನ 10 ವರ್ಷಗಳಲ್ಲಿ ನೇಪಾಳದಿಂದ 10 ಸಾವಿರ ಮೆಗಾವಾಟ್ ವಿದ್ಯುತ್ ಆಮದು ಮಾಡಿಕೊಳ್ಳುವ ಕುರಿತು ಭಾರತ ಗುರುವಾರ ಒಪ್ಪಂದ ಮಾಡಿಕೊಂಡಿತು. ಈ ಒಪ್ಪಂದ ಹೆಚ್ಚಿನ ಹೂಡಿಕೆ ಸೆಳೆಯಲು ನೇಪಾಳಕ್ಕೆ ನೆರವಾಗಲಿದೆ ಎಂದು ಹೇಳಲಾಗಿದೆ.

ನೇಪಾಳದಲ್ಲಿನ ನದಿಗಳಿಂದಾಗಿ ವಾರ್ಷಿಕ 42 ಸಾವಿರ ಮೆಗಾವಾಟ್‌ ಜಲವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ. ಆದರೆ, ತಾಂತ್ರಿಕತೆ ನೆರವು, ಹಣಕಾಸು ಸಂಪನ್ಮೂಲ ಕೊರತೆಯಿಮದಾಗಿ ಇದು ಸಾಧ್ಯವಾಗಿಲ್ಲ. ಪ್ರಸ್ತುತ ವಾರ್ಷಿಕ 3000 ಮೆಗಾವಾಟ್ ಉತ್ಪಾದನೆಯಾಗುತ್ತಿದೆ.

ಪ್ರಸ್ತುತ ನೇಪಾಳದ ಜೊತೆಗೆ ಅಲ್ಪಾವಧಿಯ ವಿದ್ಯುತ್‌ ಖರೀದಿ ಒಡಂಬಡಿಕೆ ಹೊಂದಿರುವ ಭಾರತ,  ನೇಪಾಳದಲ್ಲಿ ಜಲವಿದ್ಯುತ್‌ ಸ್ಥಾವರಗಳ ಸ್ಥಾಪನೆಗೆ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡುತ್ತಿದೆ. ನೆರೆ ರಾಷ್ಟ್ರದಲ್ಲಿ ತನ್ನ ಪ್ರಭಾವ ಉತ್ತಮಪಡಿಸಿಕೊಳ್ಳುವ ಉದ್ದೇಶವು ಇದೆ.

ನೆರೆ ರಾಷ್ಟ್ರ ಚೀನಾ ಗಡಿಯಲ್ಲಿ ಹೆಚ್ಚು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಈ ಒಡಂಬಡಿಕೆಯು ಮಹತ್ವದ್ದಾಗಿದೆ.ಪ್ರಧಾನಿ ನರೇಂದ್ರ ಮೋದಿ, ನೇಪಾಳದ ಪ್ರಧಾನಿ ಪುಷ್ಪಕಮಲ್‌ ದಾಹಲ್‌ ಅವರು ವಿದ್ಯುತ್‌ ಕ್ಷೇತ್ರದಲ್ಲಿ ದೀರ್ಘಾವಧಿ ಒಪ್ಪಂದ ಹೊಂದಲು ಕಳೆದ ವರ್ಷ ಸಮ್ಮತಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಪ್ರೇಮ್‌ ರೈ ಅವರು, ವಿದ್ಯುತ್ ಖರೀದಿ ಸೇರಿದಂತೆ ಒಟ್ಟು ನಾಲ್ಕು ಒಪ್ಪಂದಗಳನ್ನು ನೇಪಾಳ–ಭಾರತ ಜಂಟಿ ಆಯೋಗದ ಸಭೆಯಲ್ಲಿ ಗುರುವಾರ ಅಂತಿಮಗೊಳಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT