ವಿಶಾಖಪಟ್ಟಣ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ಸದ್ಯದಲ್ಲೇ ಜರ್ಮನಿಯನ್ನು ಹಿಂದಿಕ್ಕಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಕೆ ಲಕ್ಷ್ಮಣ್ ಹೇಳಿದ್ದಾರೆ.

ಭಾರತದ ಆರ್ಥಿಕ ಪಥವನ್ನು ಪರಿವರ್ತಿಸುವಲ್ಲಿ ಮತ್ತು ಬೆಳವಣಿಗೆ ಹಾಗೂ ಆಡಳಿತ ಎರಡರಲ್ಲೂ ದೇಶವನ್ನು ಉದಯೋನ್ಮುಖ ಜಾಗತಿಕ ಶಕ್ತಿಯಾಗಿ ಪರಿವರ್ತಿಸುವಲ್ಲಿ ಪ್ರಧಾನಿ ಮೋದಿಯವರ ನಿರ್ಣಾಯಕ ನಾಯಕತ್ವ ಕಾರಣ ಎಂದು ಲಕ್ಷ್ಮಣ್ ಬಣ್ಣಿಸಿದ್ದಾರೆ.

ಭಾರತ ಈಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಾವು ಶೀಘ್ರದಲ್ಲೇ ಜರ್ಮನಿಯನ್ನು ಹಿಂದಿಕ್ಕಿ ಮೂರನೇ ಸ್ಥಾನವನ್ನು ಪಡೆಯುತ್ತೇವೆ ಎಂದು ರಾಜ್ಯಸಭಾ ಸದಸ್ಯ ಲಕ್ಷ್ಮಣ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ಸ್ಥಾನಮಾನ ಹಿಂಪಡೆದಿದ್ದು, ಆಪರೇಷನ್ ಸಿಂಧೂರದಂತಹ ಐತಿಹಾಸಿಕ ನಿರ್ಧಾರಗಳು ರಾಷ್ಟ್ರೀಯ ಏಕತೆ, ರಕ್ಷಣೆ ಕುರಿತಂತೆ ಪ್ರಧಾನಿ ಮೋದಿಯವರ ನಿರ್ಣಾಯಕ ನಾಯಕತ್ವದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿಯವರ ಶೂನ್ಯ ಸಹಿಷ್ಣುತಾ ನೀತಿಯನ್ನು ಅವರು ಒತ್ತಿ ಹೇಳಿದರು. ಮೂಲಸೌಕರ್ಯದಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳವರೆಗೆ ಸರ್ಕಾರದ ಅಭಿವೃದ್ಧಿ ಚಟುವಟಿಕೆಗಳು ಎಲ್ಲಾ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿವೆ ಎಂದು ಹೇಳಿದ್ದಾರೆ.

ಅವಿಭಜಿತ ಆಂಧ್ರ ಪ್ರದೇಶಕ್ಕೆ ಸಿಕ್ಕಿದ್ದ ಕೇವಲ ₹880 ಕೋಟಿ ಅನುದಾನಕ್ಕೆ ಹೋಲಿಸಿದರೆ ಇತ್ತೀಚಿನ ರೈಲ್ವೆ ಬಜೆಟ್ನಲ್ಲಿ ಆಂಧ್ರ ಪ್ರದೇಶಕ್ಕೆ ₹9,000 ಕೋಟಿ ಹಂಚಿಕೆ ಮಾಡಲಾಗಿದೆ. ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ವಿಶಾಖಪಟ್ಟಣವನ್ನು ದಕ್ಷಿಣ ಕರಾವಳಿ ರೈಲ್ವೆ ವಲಯದ ಪ್ರಧಾನ ಕಚೇರಿಯಾಗಿ ಘೋಷಿಸಲಾಗಿದೆ ಎಂದು ಲಕ್ಷ್ಮಣ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.