ನವದೆಹಲಿ: ಭಾರತ ಮತ್ತು ಬ್ರಿಟನ್ ಗುರುವಾರ ಲಂಡನ್ನಲ್ಲಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದು, ಇದು ಚರ್ಮ, ಪಾದರಕ್ಷೆಗಳು ಮತ್ತು ಬಟ್ಟೆಗಳಂತಹ ಉತ್ಪನ್ನಗಳ ರಫ್ತಿಗೆ ಅವಕಾಶ ನೀಡುತ್ತದೆ. ಬ್ರಿಟನ್ನಿಂದ ವಿಸ್ಕಿ ಮತ್ತು ಕಾರುಗಳ ಆಮದನ್ನು ಅಗ್ಗವಾಗಿಸುತ್ತದೆ ಎಂದು ವರದಿ ತಿಳಿಸಿದೆ.

ಈ ಒಪ್ಪಂದವು ಎರಡು ಆರ್ಥಿಕತೆಗಳ ನಡುವಿನ ವ್ಯಾಪಾರವನ್ನು 2030ರ ವೇಳೆಗೆ 120 ಬಿಲಿಯನ್ ಡಾಲರ್ಗಳಿಗೆ ದ್ವಿಗುಣಗೊಳಿಸಲು ಸಹಾಯ ಮಾಡುತ್ತದೆ.

ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಎಂದು ಕರೆಯಲ್ಪಡುವ ಈ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಸಮ್ಮುಖದಲ್ಲಿ ಸಹಿ ಮಾಡಲಾಗುವುದು ಎಂದು ವರದಿ ತಿಳಿಸಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಬ್ರಿಟನ್ನ ವಾಣಿಜ್ಯ ಸಚಿವ ಜೋನಾಥನ್ ರೆನಾಲ್ಡ್ಸ್ ಒಪ್ಪಂದಕ್ಕೆ ಸಹಿ ಹಾಕುತ್ತಾರೆ. ಸಹಿ ನಂತರ ಅದು ಜಾರಿಗೆ ಬರಲುಬ್ರಿಟನ್ ಸಂಸತ್ತಿನ ಅನುಮೋದನೆಯ ಅಗತ್ಯವಿದೆ. ಈ ಪ್ರಕ್ರಿಯೆಯು ಸುಮಾರು ಒಂದು ವರ್ಷ ತೆಗೆದುಕೊಳ್ಳಬಹುದು ಎನ್ಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ ಬ್ರಿಟನ್ ಮತ್ತು ಮಾಲ್ಡೀವ್ಸ್ಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಮ್ಮತಿರುವುದಾಗಿ ಮೇ 6ರಂದು ಉಭಯ ದೇಶಗಳು ಘೋಷಿಸಿದ್ದವು.

ಸರಕು, ಸೇವೆ, ನಾವೀನ್ಯತೆ, ಸರ್ಕಾರ ಉಪಕರಣಗಳ ಪೂರೈಕೆ, ಬೌದ್ಧಿಕ ಆಸ್ತಿ ಹಕ್ಕುಗಳು ಸೇರಿದಂತೆ ಹಲವು ಅಂಶಗಳನ್ನು ಒಪ್ಪಂದ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.