ವಿಶ್ವಸಂಸ್ಥೆ: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ.

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ, ಅದನ್ನು ತೆರವುಗೊಳಿಸಲೇಬೇಕು’ ಎಂದು ಹರೀಶ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಕೆಣಕಿದ ನಂತರ ಹರೀಶ್ ಅವರ ಬಲವಾದ ಪ್ರತಿಕ್ರಿಯೆ ಬಂದಿದೆ.

ಪಾಕಿಸ್ತಾನದ ಪ್ರತಿನಿಧಿಯು ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯ ಹೇಳಿಕೆಗಳನ್ನು ನೀಡಿರುವುದನ್ನು ಭಾರತ ಗಮನಿಸಬೇಕಾಗಿದೆ ಎಂದು ಹರೀಶ್ ಹೇಳಿದ್ದಾರೆ.

‘ಇಂತಹ ಪುನರಾವರ್ತಿತ ಉಲ್ಲೇಖಗಳು ಅವರ ಕಾನೂನುಬಾಹಿರ ಹಕ್ಕುಗಳನ್ನು ದೃಢೀಕರಿಸುವುದಿಲ್ಲ ಅಥವಾ ಅವರ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ’ ಎಂದು ಕಿಡಿಕಾರಿದ್ದಾರೆ.

ತಮ್ಮ ಸಂಕುಚಿತ ಮತ್ತು ವಿಭಜಕ ಕಾರ್ಯಸೂಚಿಯನ್ನು ಸಾಧಿಸಲು ಈ ವೇದಿಕೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬೇಡಿ ಎಂದು ನಾವು ಪಾಕಿಸ್ತಾನಕ್ಕೆ ಸಲಹೆ ನೀಡುತ್ತೇವೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.