ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಉದ್ದೇಶಿತ ವ್ಯಾಪಾರ ಒಪ್ಪಂದವು ದಕ್ಷಿಣ ಮತ್ತು ಕೇಂದ್ರ ಏಷ್ಯಾ ಒಳಗೊಂಡ ಪ್ರದೇಶದ ಆರ್ಥಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಸರ್ಗಿಯೊ ಗೋರ್ ಹೇಳಿದ್ದಾರೆ.

‘ರಕ್ಷಣೆ ಮತ್ತು ಭದ್ರತೆಗೆ ಸಂಬಂಧಿಸಿ ಭಾರತ ಮತ್ತು ಅಮೆರಿಕ ನಡುವಿನ ಸಹಕಾರ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ್ದಾಗಿದೆ. ಈ ಕ್ಷೇತ್ರಗಳಲ್ಲಿನ ಸಹಕಾರವು ಕ್ವಾಡ್ ಚೌಕಟ್ಟಿನ ಪ್ರಕಾರವೇ ಇರಲಿದ್ದು ಇದರಿಂದ ಉಭಯ ದೇಶಗಳ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ’ ಎಂದೂ ಹೇಳಿದ್ದಾರೆ.

ಅಮೆರಿಕ ರಾಯಭಾರ ಕಚೇರಿ ಪ್ರಕಟಿಸುವ ‘ಸ್ಪ್ಯಾನ್’ ನಿಯತಕಾಲಿಕಕ್ಕೆ ಸಂದರ್ಶನ ನೀಡಿರುವ ಗೋರ್ ಅವರು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ದಕ್ಷಿಣ ಮತ್ತು ಕೇಂದ್ರ ಏಷ್ಯಾದ ಆರ್ಥಿಕ ಪ್ರಗತಿಗೆ ನೆರವು ನೀಡಲು ಅಮೆರಿಕ ಸಿದ್ಧ. ಹೀಗಾಗಿ, ಭಾರತದೊಂದಿಗಿನ ಪ್ರಸ್ತಾವಿತ ವ್ಯಾಪಾರ ಒಪ್ಪಂದವು ಈ ಪ್ರದೇಶದ ಆರ್ಥಿಕ ಪ್ರಗತಿಗೆ ಮತ್ತಷ್ಟು ವೇಗ ನೀಡಲಿದೆ’ ಎಂದು ಗೋರ್ ಪ್ರತಿಪಾದಿಸಿದ್ದಾರೆ.

‘ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ. ಮೂಲಸೌಕರ್ಯಗಳ ಅಭಿವೃದ್ಧಿಗೂ ಭಾರತ ಒತ್ತು ನೀಡುತ್ತಿದೆ. ಇಂಧನ, ತಯಾರಿಕೆ ಕ್ಷೇತ್ರ, ಡಿಜಿಟಿಲ್ ಮೂಲಸೌಕರ್ಯಗಳ ಅಭಿವೃದ್ಧಿಯು ಆರ್ಥಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಎಲ್ಲ ಕ್ಷೇತ್ರಗಳಲ್ಲಿ ಅಮೆರಿಕ ಹೊಂದಿರುವ ಪರಿಣತಿ ಹಾಗೂ ಸಹಕಾರದಿಂದ ಎರಡೂ ದೇಶಗಳಿಗೆ ಅನುಕೂಲವಾಗಲಿದೆ’ ಎಂದು ವಿಶ್ಲೇಷಿಸಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದು ನನ್ನ ಗುರಿ. ಇದರಿಂದ ಎರಡೂ ದೇಶಗಳಿಗೆ ಪ್ರಯೋಜನವಾಗಲಿದೆ
ಸರ್ಗಿಯೊ ಗೋರ್ ಭಾರತದಲ್ಲಿನ ಅಮೆರಿಕ ರಾಯಭಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.