ನವದೆಹಲಿ: ‘ಭಾರತ– ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು ಜಾಗತಿಕ ಬೆಳವಣೆಯನ್ನು ಹೆಚ್ಚಿಸುವುದರ ಜತೆಗೆ ಉಭಯ ದೇಶಗಳ ಆರ್ಥಿಕ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಭಿಪ್ರಾಯಪಟ್ಟಿದ್ದಾರೆ.

‘ಇದು ಭಾರತ ಮತ್ತು ಅಮೆರಿಕಕ್ಕೆ ಒಳ್ಳೆಯ ಸುದ್ದಿ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವೈಯಕ್ತಿಕ ಬದ್ಧತೆಯನ್ನು ಇದು ಪ್ರತಿಬಿಂಬಿಸುತ್ತದೆ’ ಎಂದು ಅವರು ‘ಎಕ್ಸ್’ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಈ ಒಪ್ಪಂದವು ಎರಡೂ ದೇಶಗಳ ನಡುವಿನ ಬಾಂಧವ್ಯ, ನಂಬಿಕೆ ಮತ್ತು ಚೈತನ್ಯವನ್ನು ವೃದ್ಧಿಸುತ್ತದೆ’ ಎಂದಿದ್ದಾರೆ.

‘ಒಪ್ಪಂದದ ಚೌಕಟ್ಟು ವಿಶ್ವಾಸಾರ್ಹ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ. ಮೇಕ್ ಇನ್ ಇಂಡಿಯಾ ಕ್ರಮದಡಿ ಭಾರತೀಯ ರೈತರು, ಉದ್ಯಮಿಗಳು, ಮೀನುಗಾರರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ’ ಎಂದು ಹೇಳಿದ್ದಾರೆ.

ಮೋದಿ ಅವರು ತಮ್ಮ ಹೇಳಿಕೆಯಲ್ಲಿ ಎಲ್ಲೂ ರಷ್ಯಾದ ತೈಲವನ್ನು ಉಲ್ಲೇಖಿಸಿಲ್ಲ.

ಒಪ್ಪಂದಕ್ಕೆ ಕಾಂಗ್ರೆಸ್ ಟೀಕೆ

ಭಾರತ–ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟಿನ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಭಾರತವು ರಷ್ಯಾದಿಂದ ತೈಲವನ್ನು ಆಮದು ಮಾಡಿಕೊಳ್ಳುತ್ತದೆಯೋ ಇಲ್ಲವೋ ಎಂಬುದನ್ನು ಅಮೆರಿಕ ಮೇಲ್ವಿಚಾರಣೆ ಮಾಡುತ್ತದೆ ಎಂದು ಶ್ವೇತಭವನ ಬಿಡುಗಡೆ ಮಾಡಿರುವ ಹೇಳಿಕೆಯನ್ನು ಉಲ್ಲೇಖಿಸಿ, ‘ನಾಮ್ ನರೇಂದರ್, ಕಾಮ್ ಸರೆಂಡರ್’ ಎಂದು ವ್ಯಂಗ್ಯವಾಡಿದೆ.

‘ಉಭಯ ದೇಶಗಳ ಜಂಟಿ ಹೇಳಿಕೆಯು ಹೆಚ್ಚಿನ ವಿವರಗಳಿಂದ ಕೂಡಿಲ್ಲ. ಬಿಡುಗಡೆ ಆಗಿರುವ ಪ್ರಕಟಣೆ ಪ್ರಕಾರ, ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಒಂದು ವೇಳೆ ಖರೀದಿಸಲು ಮುಂದಾದರೆ ಅಮೆರಿಕ ಪುನಃ ಶೇ 25ರಷ್ಟು ಹೆಚ್ಚುವರಿ ಸುಂಕ ವಿಧಿಸಬಹುದು ಎಂದು ಘೋಷಿಸಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಹೇಳಿದ್ದಾರೆ.

‘ಭಾರತೀಯರ ರೈತರ ವೆಚ್ಚದಲ್ಲಿ ಅಮೆರಿಕದ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ‘ ಎಂದು ಅವರು ತಿಳಿಸಿದ್ದಾರೆ.

‘ಈ ಒಪ್ಪಂದದ ಪರಿಣಾಮ ಭಾರತವು ಅಮೆರಿಕದಿಂದ ಖರೀದಿಸಲಿರುವ ಸರಕುಗಳು ಮೂರು ಪಟ್ಟು ಹೆಚ್ಚಲಿವೆ. ಪ್ರತಿಯಾಗಿ ಭಾರತವು ಅಮೆರಿಕಕ್ಕೆ ರಫ್ತು ಮಾಡುವ ಐ.ಟಿ ಮತ್ತು ಇತರ ಸೇವೆಗಳ ಮೇಲಿನ ಅನಿಶ್ಚಿತತೆ ಮುಂದುವರಿಯುತ್ತದೆ. ಭಾರತದ ಸರಕುಗಳು ಅಮೆರಿಕದಲ್ಲಿ ಮೊದಲಿಗಿಂತ ಹೆಚ್ಚಿನ ಸುಂಕಗಳನ್ನು ಎದುರಿಸಬೇಕಾಗುತ್ತದೆ’ ಎಂದು ರಮೇಶ್ ಹೇಳಿದ್ದಾರೆ.

‘ಮೋದಿ– ಟ್ರಂಪ್ ಗೆಳೆತನ, ಅಪ್ಪುಗೆಗಳು, ಫೋಟೊ ಪ್ರದರ್ಶನಗಳು ಭಾರತಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ’ ಎಂದು ಅವರು ಜರಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.