ನವದೆಹಲಿ: ಕೋವಿಡ್–19 ಸೋಂಕಿತರ ಚಿಕಿತ್ಸೆಯಲ್ಲಿ ಬಳಸುವ ರೆಮ್‌ಡಿಸಿವಿರ್ ಚುಚ್ಚುಮದ್ದಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.

ರೆಮ್‌ಡಿಸಿವಿರ್ ಉತ್ಪಾದನೆಗೆ ಬಳಸುವ ಔಷಧೀಯ ಪದಾರ್ಥಗಳ ಮೇಲಿನ ಆಮದು ಸುಂಕವನ್ನೂ ರದ್ದುಪಡಿಸಲಾಗಿದೆ. ರೆಮ್‌ಡಿಸಿವಿರ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಓದಿ:ಮುಂಬೈನ ಎರಡು ಸ್ಥಳಗಳಲ್ಲಿ ದಾಳಿ; 2,200 ರೆಮ್‌ಡಿಸಿವಿರ್ ವಶಕ್ಕೆ

ದೇಶದಲ್ಲಿ ರೆಮ್‌ಡಿಸಿವಿರ್ ಕೊರತೆ ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ಆದರೆ ಭಾರತವು ರೆಮ್‌ಡಿಸಿವಿರ್ ಅನ್ನು ರಫ್ತು ಮಾಡುವುದೇ ಹೆಚ್ಚು. ಕೆಲ ದಿನಗಳ ಹಿಂದಿನವರೆಗೂ ಸುಮಾರು 100 ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಇತ್ತೀಚೆಗೆ ರಫ್ತು ನಿಷೇಧಿಸಲಾಗಿತ್ತು.

ಓದಿ:ರೆಮ್‌ಡಿಸಿವಿರ್ ದಾಸ್ತಾನು: ಬಿಜೆಪಿ–ಸೇನಾ ವಾಕ್ಸಮರ ತೀವ್ರ

ಈ ಮಧ್ಯೆ, ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ರಾಜ್ಯಗಳಿಗೆ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಲೂ ಕೇಂದ್ರ ನಿರ್ಧರಿಸಿದೆ.

‘ವೈದ್ಯಕೀಯ ಆಮ್ಲಜನಕ ಅಗತ್ಯವೂ ಇರುವಂಥ ಸಂದರ್ಭಗಳಲ್ಲಿ ರೆಮ್‌ಡೆಸಿವಿರ್ ಬಳಸಬೇಕೆಂದು ವೈದ್ಯಕೀಯ ಮಾರ್ಗದರ್ಶನ ಇದೆ. ಹೀಗಾಗಿ ವಿವಿಧ ರಾಜ್ಯಗಳಿಗೆ ಮಾಡಲಾದ ಆಮ್ಲಜನಕ ಹಂಚಿಕೆಯನ್ನು ಆಧರಿಸಿ ರೆಮ್‌ಡೆಸಿವಿರ್ ಪೂರೈಸಲಾಗುವುದು’ ಎಂದೂ ಹರ್ಷವರ್ಧನ್ ತಿಳಿಸಿದ್ದಾರೆ.

ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಔಷಧ ಕಾರ್ಯದರ್ಶಿ ಎಸ್.ಅಪರ್ಣಾ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.

ಓದಿ:ಮಹಾರಾಷ್ಟ್ರದಲ್ಲಿ ಬಿಜೆಪಿಯವರಿಂದ ರೆಮ್‌ಡಿಸಿವಿರ್ ದಾಸ್ತಾನು: ಪ್ರಿಯಾಂಕಾ ಆಕ್ಷೇಪ

ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿದ್ದು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಪರಿಣಾಮವಾಗಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿದೆ. ರೆಮ್‌ಡೆಸಿವಿರ್ ಸಹ ಸಾಕಷ್ಟು ಪ್ರಮಾಣದಲ್ಲಿ ದೊರೆಯುತ್ತಿಲ್ಲ ಎಂದು ರಾಜ್ಯ ಸರ್ಕಾರಗಳು ದೂರಿವೆ.

ದೇಶದಾದ್ಯಂತ ಮಂಗಳವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 2,59,170 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 1,761 ಮಂದಿ ಸೋಂಕಿತರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.