ಗುವಾಹಟಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಜತೆಗಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ಅಥವಾ ದೇಶದ ಹಸ್ತಕ್ಷೇಪವನ್ನು ಭಾರತ ಅನುಮತಿಸುವುದಿಲ್ಲ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ತಿಳಿಸಿದ್ದಾರೆ.

ಪಾಕಿಸ್ತಾನ ಜತೆಗಿನ ಮಾತುಕತೆ ಕೇವಲ ಭಯೋತ್ಪಾದನೆ ಮತ್ತು ಭಾರತಕ್ಕೆ ಸೇರಿದ ಪಾಕ್ ಆಕ್ರಮಿತ ಕಾಶ್ಮೀರ ಕುರಿತ ಎರಡು ವಿಷಯಗಳಿಗೆ ಸಂಬಂಧಿಸಿರುತ್ತದೆ ಎಂದು ಚೌಹಾಣ್ ಪುನರುಚ್ಚರಿಸಿದ್ದಾರೆ.

ಭಾರತ ಯಾವಾಗಲೂ ಶಾಂತಿಯನ್ನು ಪ್ರತಿಪಾದಿಸುತ್ತದೆ. ಆದರೆ ಪ್ರಚೋದನೆ ನೀಡದರೆ ಅದರ ವಿರುದ್ಧ ಸಮರ ಸಾರಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.
.ಪಾಕ್ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ರಾಣಿ ಬಂಧನ.ಕಾಂಗ್ರೆಸ್ ನಾಯಕರು ಪಾಕಿಸ್ತಾನ ಏಜೆಂಟರು: ಯತ್ನಾಳ.
'ನಾವು ಇತರರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಆದರೆ ಯಾರಾದರೂ ನಮ್ಮನ್ನು ಕೆಣುಕಲು ಪ್ರಯತ್ನಿಸಿದರೆ, ನಾವು ಅವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಚೌಹಾಣ್ ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿಯ ನಂತರ ಭಾರತ, ಪಾಕಿಸ್ತಾನಿ ಜನರಿಗೆ ಅಥವಾ ಸೈನ್ಯಕ್ಕೆ ಹಾನಿ ಮಾಡದಿರಲು ನಿರ್ಧರಿಸಿತು. ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತ್ತು. ಈ ಮೂಲಕ ಭಾರತ ಜಗತ್ತಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ಚೌಹಾಣ್ ಹೇಳಿದ್ದಾರೆ.

'ನಾವು ಶಾಂತಿಯನ್ನು ಬಯಸುತ್ತೇವೆ. ಆದರೆ, ಅಗತ್ಯವಿದ್ದಾಗಲೆಲ್ಲಾ ನಾವು ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ. ನಮ್ಮ ಸಶಸ್ತ್ರ ಪಡೆಗಳು ಮತ್ತು ಕಾರ್ಯಾಚರಣೆಗೆ ಕಾರ್ಯತಂತ್ರ ರೂಪಿಸಿದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಚೌಹಾಣ್ ತಿಳಿಸಿದ್ದಾರೆ.
.ಇಸ್ರೇಲ್ ದಾಳಿ: ಗಾಜಾದಲ್ಲಿ 58 ಮಂದಿ ಸಾವು.ಮಧುಮೇಹದ ಜಾಗೃತಿ ಮೂಡಿಸುವ ಫಲಕ ಸ್ಥಾಪಿಸಿ: ಶಾಲೆಗಳಿಗೆ ಸಿಬಿಎಸ್ಇ.'ಆಪರೇಷನ್ ಸಿಂಧೂರ', ಬಿನ್ ಲಾಡೆನ್ ಕೊಲೆಗೆ ಸಾಮ್ಯತೆಯಿದೆ: ಉಪರಾಷ್ಟ್ರಪತಿ ಧನಕರ್ .ವಿದೇಶಕ್ಕೆ ನಿಯೋಗ | ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಕಳುಹಿಸಬೇಕೆ?: ಬಿಜೆಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.