ನವದೆಹಲಿ: ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್‌ಗಳ ಪೈಕಿ ವಿಂಗ್ ಕಮಾಂಡರ್ ದೀಪಕ್ ವಸಂತ ಸಾಠೆ, ಬೋಯಿಂಗ್ 737 ವಿಮಾನಗಳ ಹಾರಾಟದಲ್ಲಿ ಅಪಾರ ಅನುಭವ ಹೊಂದಿದ್ದರು.

ಭಾರತೀಯ ವಾಯುಪಡೆಯ ಯುದ್ಧವಿಮಾನಗಳ ಹಾರಾಟದಲ್ಲಿ ನೈಪುಣ್ಯ ಹೊಂದಿದ್ದ ಸಾಠೆ, ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಏರ್ ಇಂಡಿಯಾದ ಹಲವು ವಿಮಾನಗಳ ಹಾರಾಟ ನಡೆಸಿದ್ದ ಅವರು ನಂತರ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ತಮ್ಮ ಸೇವೆ ಮುಂದುವರಿಸಿದ್ದರು ಎಂದು ವಿವಿಧ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

‘ಸಾಠೆ ವೃತ್ತಿಪರರಾಗಿದ್ದರು. ವಾಯುಪಡೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ರಾಷ್ಟ್ರಪತಿ ಚಿನ್ನದ ಪದಕ ಪ್ರದಾನ ಮಾಡಿ ಸನ್ಮಾನಿಸಲಾಗಿತ್ತು. ಹೈದರಾಬಾದ್‌ನಲ್ಲಿರುವ ಏರ್‌ಫೋರ್ಸ್ ಅಕಾಡೆಮಿಯಲ್ಲಿದ್ದಾಗ ಅವರು ಸ್ವಾರ್ಡ್ ಆಫ್ ಆನರ್ ಅನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು’ ಎಂದು ಅಧಿಕಾರಿಯೊಬ್ಬರು ಸ್ಮರಿಸಿದರು.

ದೀಪಕ್ ವಸಂತ ಸಾಠೆ

ಏರ್ ಇಂಡಿಯಾದಲ್ಲಿ ಸೇವೆಗೆ ಸೇರಿದ ನಂತರ ಅವರು ಏರ್‌ಬಸ್310 ಗಳ ಹಾರಾಟವನ್ನು ಯಶಸ್ವಿಯಾಗಿ ನಡೆಸಿದ್ದರು.

ಅನುಭವಿ ಪೈಲಟ್ ಆಗಿದ್ದ, ಸಾಠೆ ಅವರು ಈ ನತದೃಷ್ಟ ವಿಮಾನವನ್ನು ಇಳಿಸುವ ಪ್ರಯತ್ನದಲ್ಲಿ ಕೋಯಿಕ್ಕೋಡ್ ವಿಮಾನ ನಿಲ್ದಾಣವನ್ನು ಹಲವು ಬಾರಿ ಸುತ್ತು ಹಾಕಿಸಿದ್ದರು ಎಂದು ‘ಫ್ಲೈಟ್‌ರೆಡಾರ್24’ ವೆಬ್‌ಸೈಟ್ ವರದಿ ಮಾಡಿದೆ. ಎರಡು ಬಾರಿ ಇಳಿಸುವ ಪ್ರಯತ್ನವನ್ನೂ ಮಾಡಿದ್ದರು. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಸುರಕ್ಷಿತವಾಗಿ ಇಳಿಯಲೇ ಇಲ್ಲ.

ಕರಾವಳಿ ನಡುಗಿಸಿದ್ದ ದುರ್ಘಟನೆ

ಮಂಗಳೂರು: ಕೇರಳದ ಕೋಯಿಕ್ಕೋಡ್‌ನಲ್ಲಿ ಶುಕ್ರವಾರ ಸಂಭವಿಸಿದ ವಿಮಾನ ಅಪಘಾತದ ಮಾದರಿಯದ್ದೇ ದುರ್ಘಟನೆಗೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹತ್ತು ವರ್ಷದ ಹಿಂದೆ ಸಾಕ್ಷಿಯಾಗಿತ್ತು. ಭೀಕರ ದುರಂತದಲ್ಲಿ 158 ಮಂದಿ ಮೃತಪಟ್ಟಿದ್ದರು.

ಒಂದೇ ಮಾದರಿ: ಶುಕ್ರವಾರ ವಿಮಾನ ಅಪಘಾತ ಸಂಭವಿಸಿರುವ ಕೋಯಿಕ್ಕೋಡ್ ವಿಮಾನ ನಿಲ್ದಾಣ ‘ಟೇಬಲ್ ಟಾಪ್’ ಮಾದರಿಯದ್ದು.ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ‘ಟೇಬಲ್ ಟಾಪ್’ ಮಾದರಿಯದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.