ಗ್ಯಾಂಗ್ಟಕ್: ಪೂರ್ವ ಸಿಕ್ಕಿಂನ ಅತ್ಯಂತ ಎತ್ತರದ ಪ್ರದೇಶಗಳಲ್ಲಿ ಸಿಲುಕಿದ್ದ 800ಕ್ಕೂ ಅಧಿಕ ಪ್ರವಾಸಿಗರನ್ನು ಭಾರತೀಯ ಸೇನೆ ಬುಧವಾರ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಪ್ರಮಾಣದಲ್ಲಿ ಹಿಮ ಸುರಿಯುತ್ತಿದ್ದುದರಿಂದ ಹಾಗೂ ಬಿರುಗಾಳಿಯಿಂದಾಗಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಪ್ರವಾಸಿಗರು ಹಲವು ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದರು.

ಸೇನೆಯ 'ತ್ರಿಶಕ್ತಿ ಪಡೆ' ರಾತ್ರಿಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿ, ಎಲ್ಲ ಪ್ರವಾಸಿಗರನ್ನೂ ಸುರಕ್ಷಿತ ಸ್ಥಳಗಳಿಗೆ ಕರೆತಂದಿದೆ. ಎಲ್ಲರಿಗೂ ಆಶ್ರಯ, ಬಿಸಿ ಆಹಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಪ್ರವಾಸಿಗರಿಗೆ ಆಶ್ರಯ ಕಲ್ಪಿಸುವುದಕ್ಕಾಗಿ ಯೋಧರು ತಮ್ಮ ವಸತಿ ಸಂಕೀರ್ಣಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.