ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ವರ್ಷಗಳಲ್ಲಿ 16 ಚೀನೀಯರಿಗೆ ಭಾರತದ ಪೌರತ್ವ

Last Updated 16 ಮಾರ್ಚ್ 2022, 11:28 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 15 ವರ್ಷಗಳಲ್ಲಿ ಚೀನಾದ 16 ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭಾರತದ ಪೌರತ್ವ ಆಶಿಸಿ ಇನ್ನೂ 10 ಚೀನೀಯರ ಅರ್ಜಿಗಳು ಬಾಕಿ ಉಳಿದಿವೆ. 2007ರಿಂದ ಇಲ್ಲಿಯವರೆಗೆ 16 ಚೀನಾ ಪ್ರಜೆಗಳು ಭಾರತೀಯ ಪೌರತ್ವವನ್ನು ಪಡೆದುಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಭಾರತದಲ್ಲಿ ಆಶ್ರಯ ಬಯಸಿದವರು ಸೇರಿ ಎಲ್ಲಾ ವಿದೇಶಿ ಪ್ರಜೆಗಳಿಗೆ ವಿದೇಶಿಯರ ಕಾಯ್ದೆ 1946, ವಿದೇಶಿಯರ ನೋಂದಣಿ ಕಾಯ್ದೆ 1939, ಪಾಸ್‌ಪೋರ್ಟ್‌ (ಭಾರತದ ಪ್ರವೇಶಕ್ಕೆ) ಕಾಯ್ದೆ 1920 ಮತ್ತು ಪೌರತ್ವ ಕಾಯ್ದೆ 1955ರ ನಿಬಂಧನೆಗಳಡಿ ಭಾರತದ ಪೌರತ್ವ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT