ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ ಕಾವಲು ಪಡೆ ಹೆಲಿಕಾಪ್ಟರ್ ಕೊಚ್ಚಿಯಲ್ಲಿ ​​​​​​​ಟೇಕ್–ಆಫ್ ವೇಳೆ ಪತನ

Last Updated 26 ಮಾರ್ಚ್ 2023, 10:38 IST
ಅಕ್ಷರ ಗಾತ್ರ

ತಿರುವನಂತಪುರ: ಭಾರತೀಯ ಕರಾವಳಿ ಕಾವಲು ಪಡೆಯ (ಐಸಿಜಿ) ಹೆಲಿಕಾಪ್ಟರ್‌ವೊಂದು ಕೊಚ್ಚಿಯ ನೆಡುಂಬಸ್ಸೇರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಟೇಕ್‌–ಆಫ್‌ ವೇಳೆ ಪತನಗೊಂಡಿದೆ.

ಮೂಲಗಳ ಪ್ರಕಾರ, ಐಸಿಜಿಯ ಮೂವರು ಸಿಬ್ಬಂದಿ ಹೆಲಿಕಾಪ್ಟರ್‌ನಲ್ಲಿದ್ದರು. ಎಲ್ಲರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. ಪ್ರಕರಣದ ಬಳಿಕ ವಿಮಾನ ನಿಲ್ದಾಣದಲ್ಲಿ ಪ್ರಯಾಣ ರದ್ದುಪಡಿಸಲಾಗಿದೆ. ಇಲ್ಲಿಗೆ ಬರಬೇಕಿದ್ದ ವಿಮಾನಗಳನ್ನು ಸಮೀಪದ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ. ಇದು ದೊಡ್ಡ ದುರಂತವೇನಲ್ಲ. ರನ್‌ವೇಗೆ ಸಮೀಪದಲ್ಲೇ ಘಟನೆ ನಡೆದಿರುವುದರಿಂದ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಪತನದಿಂದ ಆಗಿದ್ದ ಹಾನಿ ಸರಿಪಡಿಸುವ ಕಾರ್ಯ ನಡೆಯುತ್ತಿದೆ. ವಿಮಾನ ನಿಲ್ದಾಣವನ್ನು ಸಂಜೆ ಪುನರಾರಂಭಿಸಲಾಗುವುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಐಸಿಜಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT