ನವದೆಹಲಿ/ದುಬೈ: ಇರಾನ್ ಸೌದಿ ಅರೇಬಿಯಾ ಯುಎಇ ಮತ್ತು ಜೋರ್ಡನ್ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಸೂಚನೆ ನೀಡಿವೆ.

ಇಸ್ರೇಲ್ನಲ್ಲಿನ ಭಾರತ ರಾಯಭಾರ ಕಚೇರಿ ಕೂಡ ಅಲ್ಲಿನ ಭಾರತೀಯರಿಗೆ ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅನಗತ್ಯ ಪ್ರಯಾಣ ಮಾಡಬಾರದು ಮತ್ತು ಮನೆಯಲ್ಲಿಯೇ ಜಾಗರೂಕತೆಯಿಂದ ಇರುವಂತೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

ಜೋರ್ಡನ್ನಲ್ಲಿರುವ ಭಾರತೀಯ ಪ್ರವಾಸಿಗರು ನಾಗರಿಕ ವಿಮಾನಗಳ ಸಂಚಾರ ಸ್ಥಗಿತಗೊಳ್ಳುವ ಮುನ್ನ ದೇಶವನ್ನು ತೊರೆಯುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ಮಾರ್ಗಸೂಚಿಯಲ್ಲಿ ತಿಳಿಸಿದೆ. ಬಹರೇನ್ ಸೌದಿ ಅರೇಬಿಯಾ ದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳು ಕೂಡ ಅಲ್ಲಿನ ಭಾರತೀಯರಿಗೆ ಸುರಕ್ಷತೆ ಕುರಿತು ನಿರ್ದೇಶನಗಳನ್ನು ನೀಡಿವೆ.
.ಇರಾನ್ ಮೇಲೆ ಕ್ಷಿಪಣಿ ದಾಳಿ ಆರಂಭಿಸಿ ತುರ್ತು ಪರಿಸ್ಥಿತಿ ಘೋಷಿಸಿದ ಇಸ್ರೇಲ್.Israel Iran War | ಇಸ್ರೇಲ್–ಇರಾನ್ ಸಂಘರ್ಷ ತೀವ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.