ನವದೆಹಲಿ: ಪಶ್ಚಿಮ ಆಫ್ರಿಕಾದ ವಿವಿಧ ಭಾಗಗಳಲ್ಲಿ ಸರಣಿ ಭಯೋತ್ಪಾದಕ ದಾಳಿಗಳು ನಡೆದಿರುವ ಬೆನ್ನಲ್ಲೇ ಮಾಲಿಯಲ್ಲಿ ಮೂವರು ಭಾರತೀಯ ಪ್ರಜೆಗಳ ಅಪಹರಣಕ್ಕೊಳಗಾಗಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಶೋಚನೀಯ ಕೃತ್ಯವನ್ನು ಭಾರತ ಸರ್ಕಾರ ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ. ನಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ಮತ್ತು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಜುಲೈ 1ರಂದು ಶಸ್ತ್ರಸಜ್ಜಿತ ದಾಳಿಕೋರರ ಗುಂಪು ಕೇಯ್ಸ್ನಲ್ಲಿರುವ ಡೈಮಂಡ್ ಸಿಮೆಂಟ್ ಕಾರ್ಖಾನೆ ಮೇಲೆ ದಾಳಿ ನಡೆಸಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಭಾರತೀಯರನ್ನು ಬಲವಂತವಾಗಿ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಮಾಲಿಯಾದ್ಯಂತ ನಡೆದ ಸಂಘಟಿತ ದಾಳಿಗಳ ಹೊಣೆಯನ್ನು ಅಲ್ ಖೈದಾ ಅಂಗಸಂಸ್ಥೆ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮಿನ್ (ಜೆಎನ್ಐಎಂ) ಹೊತ್ತುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.