ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ದಂಡ ಸಂಹಿತೆಯ ಬದಲು ಭಾರತೀಯ ನ್ಯಾಯ ಸಂಹಿತೆ: ಲೋಕಸಭೆಯಲ್ಲಿ ಮಸೂದೆ ಮಂಡನೆ

Published 11 ಆಗಸ್ಟ್ 2023, 9:55 IST
Last Updated 11 ಆಗಸ್ಟ್ 2023, 9:55 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ದಂಡ ಸಂಹಿತೆ (Indian Penal Code), ದಂಡ ಪ್ರಕ್ರಿಯಾ ಸಂಹಿತೆ (CrPc) ಭಾರತ ಸಾಕ್ಷ್ಯ ಅಧಿನಿಯಮ (Evidence Act)ಗೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿದೆ.

ಹೊಸ ನಿಯಮದಲ್ಲಿ ಇದೇ ಮೊದಲ ಬಾರಿಗೆ ಶಿಕ್ಷೆಯಾಗಿ ಸಮುದಾಯ ಸೇವೆಯನ್ನು ಸೇರ್ಪಡೆ ಮಾಡಲಾಗಿದೆ. ತನಿಖೆಯಲ್ಲಿ ತಂತ್ರಜ್ಞಾನ ಹಾಗೂ ಫೊರೆನ್ಸಿಕ್‌ ವಿಜ್ಞಾನದ ಬಳಕೆ, ಎಲೆಕ್ಟ್ರಾನಿಕ್‌ ವಿಧದಲ್ಲಿ ಸಮನ್ಸ್‌ ಜಾರಿ ಮಾಡುವುದು ಹಾಗೂ ಎಲೆಕ್ಟ್ರಾನಿಕ್‌ ಹಾಗೂ ಡಿಜಿಟಲ್ ದಾಖಲೆಗಳನ್ನು ಸಾಕ್ಷ್ಯವನ್ನಾಗಿ ಪರಿಗಣಿಸುವ ಅವಕಾಶ ಇದೆ.

ಭಾರತೀಯ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತ ಸಾಕ್ಷ್ಯ ಅಧಿನಿಯಮಗಳು ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ 2023, ಬದಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಹಾಗೂ ಭಾರತೀಯ ಸಾಕ್ಷ್ಯಾ ಕಾನೂನು ಆಗಿ ಬದಲಾಗಲಿದೆ.

ಈ ಮೂರೂ ಮಸೂದೆಗಳನ್ನು ಗೃಹ ಸಚಿವ ಅಮಿತ್‌ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದರು.

ಸಣ್ಣಪುಟ್ಟ ಅಪರಾಧಗಳಿಗೆ ಸಮುದಾಯ ಸೇವೆಯನ್ನು ಶಿಕ್ಷೆಯಾಗಿ ನೀಡುವ ಪ್ರಸ್ತಾಪ ಭಾರತೀಯ ನ್ಯಾಯ ಸಂಹಿತೆಯಲ್ಲಿದೆ. ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅಪರಾಧಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT