ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಭಾರತದ ವಿಮಾನ ಪತನಗೊಂಡಿಲ್ಲ: ಅಧಿಕಾರಿಗಳು

Published 21 ಜನವರಿ 2024, 8:20 IST
Last Updated 21 ಜನವರಿ 2024, 8:20 IST
ಅಕ್ಷರ ಗಾತ್ರ

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಭಾರತದ ವಿಮಾನ ಅಪಘಾತಕ್ಕೀಡಾಗಿಲ್ಲ ಎಂದು ಭಾರತೀಯ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ಭಾರತದಿಂದ ಮಾಸ್ಕೊಗೆ ತೆರಳುತ್ತಿದ್ದ ವಿಮಾನವೊಂದು ಅಫ್ಗಾನಿಸ್ತಾನದ ಬಡಾಖಾನ್‌ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಗಾನ್‌ ಮಾಧ್ಯಮಗಳು ರಾತ್ರಿ ವರದಿ ಮಾಡಿದ್ದವು.

ಈ ವರದಿಗಳನ್ನು ಭಾರತೀಯ ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಅಲ್ಲಿ ಭಾರತದ ಯಾವುದೇ ವಿಮಾನ ಪತನವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ

ಶನಿವಾರ ರಾತ್ರಿ ಅಫ್ಗಾನಿಸ್ತಾನದಲ್ಲಿ ಭಾರತೀಯ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಬಂದ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT