ನವದೆಹಲಿ: ಜುಲೈ 1ರಿಂದ ಅನ್ವಯವಾಗುವಂತೆ, ಮೇಲ್, ಎಕ್ಸ್ಪ್ರೆಸ್ ರೈಲುಗಳ ಎ.ಸಿ, ನಾನ್ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್ ದರಗಳನ್ನು ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.

ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳ ನಾನ್ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಪನಗರ ರೈಲು ಮತ್ತು ಮಾಸಿಕ ಟಿಕೆಟ್ ದರಗಳಲ್ಲಿ ಯಾವುದೇ ಹೆಚ್ಚಳ ಇಲ್ಲ. ಎರಡನೇ ದರ್ಜೆ ಸಾಮಾನ್ಯ ಟಿಕೆಟ್ಗೆ ಸಂಬಂಧಿಸಿ 500 ಕಿ.ಮೀ. ವರೆಗಿನ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. 500 ಕಿ.ಮೀ. ನಂತರ ಪ್ರತಿ ಕಿ.ಮೀ.ಗೆ ಅರ್ಧಪೈಸೆಯಷ್ಟು ಹೆಚ್ಚಳ ಮಾಡುವ ಪ್ರಸ್ತಾವ ಇದೆ ಎಂದೂ ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಯಾವುದೇ ಹೊರೆಯಾಗದಂತೆ, ಕಾರ್ಯಾಚರಣೆ ವೆಚ್ಚ ಸರಿದೂಗಿಸುವ ಉದ್ದೇಶದಿಂದ ಟಿಕೆಟ್ ದರಗಳನ್ನು ಪರಿಷ್ಕರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಒಂದುವೇಳೆ, ಪರಿಷ್ಕೃತ ದರಗಳು ಜಾರಿಗೊಂಡಲ್ಲಿ, ಕೋವಿಡ್–19 ಪಿಡುಗಿನ ನಂತರ ಇದೇ ಮೊದಲ ಬಾರಿಗೆ ಟಿಕೆಟ್ ದರದಲ್ಲಿ ಹೆಚ್ಚಳ ಮಾಡಿದಂತಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.