ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಘೋಷಿಸುವುದಕ್ಕೂ ಮುನ್ನ ಜನದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆದರೆ, ಇದು ಪೂರ್ವ ನಿಗದಿತ ಭೇಟಿಯಾಗಿರಲಿಲ್ಲ ಎಂದು ಅದು ತಿಳಿಸಿದೆ.

ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಧನಕರ್ ಅವರು ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದರು. ಇದಾದ ಅರ್ಧ ಗಂಟೆಯ ನಂತರ ರಾಜೀನಾಮೆ ಪತ್ರವನ್ನು ಎಕ್ಸ್ನಲ್ಲಿ ಹಂಚಿಕೊಳ್ಳುವ ಮೂಲಕ ಬಹಿರಂಗಪಡಿಸಿದ್ದರು.

‘ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ‘ ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಅವರು ತಿಳಿಸಿದ್ದರು.

74 ವರ್ಷದ ಧನಕರ್, ಆಗಸ್ಟ್ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. 2027ರ ಆಗಸ್ಟ್ನಲ್ಲಿ ಅವರ ಅಧಿಕಾರವಧಿ ಕೊನೆಗೊಳ್ಳುತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.