ಮಾಸ್ಕೋ: ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಉಕ್ರೇನ್ ನಡೆಸಿದ ಭಾರಿ ಡ್ರೋನ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಈ ಪೈಕಿ ಓರ್ವ ಭಾರತದ ಪ್ರಜೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ.
.ರಷ್ಯಾದ 33 ಸಾವಿರ ಡ್ರೋನ್ ನಾಶ: ಉಕ್ರೇನ್ .
‘ಮಾಸ್ಕೋ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಡ್ರೋನ್ ದಾಳಿಯಲ್ಲಿ ಓರ್ವ ಭಾರತೀಯ ಕಾರ್ಮಿಕ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ’ ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ದಾಳಿ ನಡೆದ ಸ್ಥಳಕ್ಕೆ ರಾಯಭಾರ ಕಚೇರಿಯ ಅಧಿಕಾರಿಗಳು ತೆರಳಿದ್ದು, ಆಸ್ಪತ್ರೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಭೇಟಿಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

600 ಡ್ರೋನ್ಗಳ ಮೂಲಕ ರಷ್ಯಾ ಮೇಲೆ ಇರಾನ್ ಸರಣಿ ದಾಳಿ ನಡೆಸಿದ್ದು, ಮಾಸ್ಕೋ ಪ್ರದೇಶದಲ್ಲಿ ಮೂವರು ಮತ್ತು ಬೆಲ್ಗೊರೊಡ್ ಪ್ರದೇಶದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಘರ್ಷದ ಅವಧಿಯಲ್ಲಿ ರಾಜಧಾನಿಯ ಮೇಲೆ ನಡೆದ ಅತಿ ದೊಡ್ಡ ದಾಳಿ ಇದಾಗಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

ಕೀವ್ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಉಕ್ರೇನ್ ರಾಜಧಾನಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಉಕ್ರೇನ್ ಪ್ರತಿಜ್ಞೆ ಮಾಡಿತ್ತು.

(ಎಎಫ್ಪಿ ವರದಿ)
.ಅಮೆರಿಕ ಮಧ್ಯಸ್ಥಿಕೆ ಮಾತುಕತೆ ಸ್ಥಗಿತ: ರಷ್ಯಾ ಎದುರು ಉಕ್ರೇನ್ಗೆ ಮುನ್ನಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.