ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Published 15 ಮೇ 2024, 8:27 IST
Last Updated 15 ಮೇ 2024, 8:27 IST
ಅಕ್ಷರ ಗಾತ್ರ

ಲಖನೌ: ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.

ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ‍ಪ್ರಶ್ನಿಸಿದರು.

‘ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಗಿದಿದೆ. ಇಂಡಿಯಾ ಒಕ್ಕೂಟವು ಭದ್ರ ಸ್ಥಾನದಲ್ಲಿದೆ. ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ’ ಎಂದು ಹೇಳಿದರು.

‘ಇವರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ನಾಲ್ಕನೇ ಮೂರು ಬಹುಮತ ಬೇಕು ಎಂದು ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಕರ್ನಾಟಕದಲ್ಲಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ಮಂದಿ ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಮೋದಿ ಯಾಕೆ ಕ್ರಮ ತೆಗೆದುಕೊಂಡಿಲ್ಲ‘ ಎಂದು ಖರ್ಗೆ ಪ್ರಶ್ನಿಸಿದರು.

ಬಡವರಿಗೆ ಆಹಾರ ಸಿಗುವಂತಾಗಲು ಕಾಂಗ್ರೆಸ್ ಕಾನೂನು ತಂದಿದೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ 10 ಕೆ.ಜಿ ಉಚಿತ ಅಕ್ಕಿ ನೀಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT