ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಸಂಯುಕ್ತ ಅರಬ್ ಒಕ್ಕೂಟದ (ಯುಎಇ) ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕದನ ವಿರಾಮ ಜಾರಿಗೆ ಬಂದ ಬಳಿಕ ಅಮೆರಿಕದ ಮಿತ್ರ ರಾಷ್ಟ್ರವಾದ ಯುಎಇ ಮೇಲೆ ಇರಾನ್ ಇದೇ ಮೊದಲ ಬಾರಿಗೆ ದಾಳಿ ನಡೆಸಿತು.

ಯುಎಇ ಮೇಲೆ ನಡೆದ ದಾಳಿಯಲ್ಲಿ ಭಾರತದ ಮೂವರು ನಾಗರಿಕರು ಗಾಯಗೊಂಡಿದ್ದಾರೆ. ನಾವಿದನ್ನು ತೀವ್ರವಾಗಿ ಖಂಡಿಸುತ್ತೇವೆ. ನಾಗರಿಕರು ಹಾಗೂ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಯುಎಇಯೊಂದಿಗೆ ಭಾರತ ದೃಢವಾಗಿ ನಿಲ್ಲುತ್ತದೆ. ರಾಜತಾಂತ್ರಿಕ ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

ಹೊರ್ಮುಜ್ ಜಲಸಂಧಿ ಮೂಲಕ ಅಡಚಣೆಯಿಲ್ಲದ ಮುಕ್ತ ಸಂಚಾರಕ್ಕಾಗಿ ಪ್ರಾದೇಶಿಕ ಶಾಂತಿ, ಸ್ಥಿರತೆ ಹಾಗೂ ಜಾಗತಿಕ ಇಂಧನ ಭದ್ರತೆ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಮೋದಿ ಹೇಳಿದ್ದಾರೆ.

ಈ ಮೊದಲು ಇರಾನ್ ನಡೆಸಿರುವ ದಾಳಿಯಲ್ಲಿ ಭಾರತೀಯರು ಗಾಯಗೊಂಡಿರುವುದನ್ನು ವಿದೇಶಾಂಗ ಸಚಿವಾಲಯವು ಖಂಡಿಸಿತ್ತು.
.ಯುಎಇ ಮೇಲೆ ಇರಾನ್ ದಾಳಿಯಲ್ಲಿ ಭಾರತೀಯರಿಗೆ ಗಾಯ: ವಿದೇಶಾಂಗ ಸಚಿವಾಲಯ ಖಂಡನೆ.ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಬಿಡದಿರಲು ಕಾರಣ ತಿಳಿಸಿದ ಟ್ರಂಪ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.