ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಅಭಿವೃದ್ಧಿಯ ಪಯಣ ಮೋದಿ ನಾಯಕತ್ವದಲ್ಲಿ ಮುಂದುವರೆಯಲಿದೆ: ಅಮಿತ್‌ ಶಾ

Published 14 ಮೇ 2024, 10:36 IST
Last Updated 14 ಮೇ 2024, 10:36 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿಯ ಪಯಣವು ಯಾವುದೇ ಅಡೆತಡೆಯಿಲ್ಲದೆ ಸಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಗಳವಾರ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್‌‘ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಭಾರತೀಯ ಸಂಸ್ಕೃತಿಯ ಕೇಂದ್ರವಾದ ವಾರಾಣಸಿಯಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿರುವುದಕ್ಕೆ ಪ್ರಧಾನಿ ಅವರಿಗೆ ಅಭಿನಂದನೆಗಳು. ಈ ಬಾರಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ವಾರಾಣಸಿಯ ಜನರು ಆಶೀರ್ವದಿಸಲಿದ್ದಾರೆ‘ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಮಾತ್ರವಲ್ಲದೇ ಇಡೀ ಭಾರತವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರಧಾನಿ ಮೋದಿ ಅವರು ಹೆಚ್ಚಿಸಿದ್ದಾರೆ ಎಂದು ಹೇಳಿದ್ದಾರೆ.

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಅವಧಿಗೆ ಪ್ರಧಾನಿ ಮೋದಿ ಇಂದು (ಮಂಗಳವಾರ) ನಾಮಪತ್ರ ಸಲ್ಲಿಸಿದರು. ಈ ವೇಳೆ ಎನ್‌ಡಿಎ ಮೈತ್ರಿಕೂಟದ ಹಲವು ನಾಯಕರು ಸೇರಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT