ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾಡುಲರ್ ಸೇತುವೆ’ ಸೇನೆಗೆ ಸೇರ್ಪಡೆ

Published 27 ಫೆಬ್ರುವರಿ 2024, 15:59 IST
Last Updated 27 ಫೆಬ್ರುವರಿ 2024, 15:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೇಶೀಯವಾಗಿ ವಿನ್ಯಾಸಗೊಳಿಸಿ, ತಯಾರಿಸಲಾಗಿರುವ ‘ಮಾಡುಲರ್ ಸೇತುವೆ’ಯನ್ನು ಭಾರತೀಯ ಸೇನೆಗೆ ಸೇರ್ಪಡೆ ಮಾಡಲಾಗಿದೆ ಎಂದು ಸೇನೆ ಮಂಗಳವಾರ ತಿಳಿಸಿದೆ.

ಇದು, ಸೇನೆಯ ಎಂಜಿನಿಯರಿಂಗ್ ವಿಭಾಗದ ಸಾಮರ್ಥ್ಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದೆ.

ಇಲ್ಲಿನ ಮಾಣಿಕ್‌ಶಾ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇನೆ ಮುಖ್ಯಸ್ಥ ಜನರಲ್ ಮನೋಜ್‌ ಪಾಂಡೆ ಹಾಗೂ ಎಲ್‌ ಅಂಡ್‌ ಟಿ ಕಂಪನಿಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಯಾಂತ್ರಿಕವಾಗಿ ರೂಪಿಸಲಾಗಿರುವ 46 ಮೀಟರ್‌ ಉದ್ದದ ಈ ಸೇತುವೆಯನ್ನು ಸೇನೆಯ ವಾಹನಗಳಲ್ಲಿ ಸಾಗಿಸಬಹುದಾಗಿದ್ದು, ಕಾಲುವೆಗಳು, ಹಳ್ಳಗಳು ಸೇರಿದಂತೆ ವಿವಿಧ ಅಡಚಣೆಗಳನ್ನು ಸುಲಭವಾಗಿ ದಾಟಲು ಸಾಧ್ಯವಾಗಲಿದೆ. ಬಿಡಿಭಾಗಗಳನ್ನು ತ್ವರಿತವಾಗಿ ಜೋಡಿಸಿ, ಸೇತುವೆ ಸಿದ್ಧಪಡಿಸಬಹುದಾಗಿದೆ. ಅಷ್ಟೇ ವೇಗವಾಗಿ ಅವುಗಳನ್ನು ಬೇರ್ಪಡಿಸಿ ಸಾಗಣೆ ಮಾಡಲೂಬಹುದು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

‘ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ₹2,585 ಕೋಟಿ ವೆಚ್ಚದಲ್ಲಿ ಒಟ್ಟು 41 ಮಾಡುಲರ್‌ ಸೇತುವೆ ಸೆಟ್‌ಗಳನ್ನು ಸೇನೆಗೆ ಸೇರ್ಪಡೆ ಮಾಡಲಾಗುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇವುಗಳನ್ನು ಡಿಆರ್‌ಡಿಒ ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿದೆ. ಎಲ್‌ ಅಂಡ್‌ ಟಿ ಕಂಪನಿ ತಯಾರಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT