Windshield of IndiGo aircraft cracks ahead of its arrival in Chennai

ಚೆನ್ನೈ: ಮಧುರೈನಿಂದ 76 ಪ್ರಯಾಣಿಕರನ್ನು ಹೊತ್ತು ಬಂದಿದ್ದ ಇಂಡಿಗೊ ಸಂಸ್ಥೆಯ ವಿಮಾನದ ವಿಂಡ್ಶೀಲ್ಡ್ನಲ್ಲಿ ಲ್ಯಾಂಡಿಂಗ್ ವೇಳೆ ಬಿರುಕು ಕಾಣಿಸಿಕೊಂಡಿದೆ. ಬಿರುಕು ಬಿಟ್ಟಿರುವುದನ್ನು ಪೈಲಟ್ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಭಾಗದ ಗಾಜಿನಲ್ಲಿ ಬಿರುಕು ಕಾಣಿಸಿಕೊಂಡಿರುವುದನ್ನು ಪೈಲಟ್ ಗಮನಿಸಿ ವಿಮಾನ ನಿಲ್ದಾಣದಲ್ಲಿನ ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ನೀಡಿದರು.

ಮಾಹಿತಿ ಪಡೆದ ನಂತರ, ವಿಮಾನ ನಿಲ್ದಾಣದಲ್ಲಿ ಬೇಕಾದ ವ್ಯವಸ್ಥೆ ಮಾಡಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಅವರು ಹೇಳಿದ್ದಾರೆ.

ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಪಾರ್ಕಿಂಗ್ ಮಾಡಿ, ನಂತರ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪ್ರಸ್ತುತ, ವಿಂಡ್ಶೀಲ್ಡ್ ಅನ್ನು ಬದಲಾಯಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಘಟನೆಯ ಕಾರಣ ಇನ್ನೂ ತಿಳಿದುಬಂದಿಲ್ಲ, ಘಟನೆಯಿಂದಾಗಿ, ಮಧುರೈಗೆ ವಿಮಾನದ ಮರು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ, ವಿಮಾನಯಾನ ಸಂಸ್ಥೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.