ನವದೆಹಲಿ: ಸತತ ಆರನೇ ದಿನವಾದ ಭಾನುವಾರವೂ ಇಂಡಿಗೊ ಏರ್ಲೈನ್ಸ್ಗೆ ಸೇರಿದ ವಿಮಾನಗಳ ಹಾರಾಟದಲ್ಲಿ ಅಡಚಣೆ ಮುಂದುವರಿದಿದೆ. ದೆಹಲಿ, ಕೋಲ್ಕತ್ತ, ಹೈದರಾಬಾದ್ ಸೇರಿದಂತೆ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಲ್ಲಿ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ಮತ್ತು ಇಲ್ಲಿಂದ ಹೊರಡಬೇಕಿದ್ದ ಒಟ್ಟು 109 ಇಂಡಿಗೊ ವಿಮಾನಗಳು ರದ್ದಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣದ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಮತ್ತು ಆಗಮಿಸಬೇಕಿದ್ದ ಒಟ್ಟು 115 ಇಂಡಿಗೊ ವಿಮಾನಗಳು ರದ್ದಾಗಿವೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋಲ್ಕತ್ತದಲ್ಲಿ 76, ಪುಣೆಯಲ್ಲಿ 25, ಅಹಮದಾಬಾದ್ನಲ್ಲಿ 20, ಅಗರ್ತಲಾ ವಿಮಾನ ನಿಲ್ದಾಣದಲ್ಲಿ 6 ಇಂಡಿಗೊ ವಿಮಾನಗಳ ಹಾರಾಟ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಒಟ್ಟಾರೆ ಶೇಕಡ 33ರಷ್ಟು ಇಂಡಿಗೊ ವಿಮಾನಗಳ ಹಾರಾಟ ರದ್ದಾಗಿದೆ.

ವಿಮಾನ ಕಾರ್ಯಾಚರಣೆಯಲ್ಲಿ ಉಂಟಾದ ವ್ಯತ್ಯಯದ ಬಗ್ಗೆ 24 ಗಂಟೆಯೊಳಗೆ ವಿವರಣೆ ನೀಡಿ ಎಂದು ಇಂಡಿಗೊ ಸಿಇಒ ಪೀಟರ್ ಎಲ್ಬರ್ಸ್ ಹಾಗೂ ವ್ಯವಸ್ಥಾಪಕ ಈಸೀತ್ರೆ ಪೊರ್ಖೆರಸ್ ಅವರಿಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
.IndiGo Crisis: ವಿಮಾನ ಟಿಕೆಟ್ ದರಕ್ಕೆ ಕೇಂದ್ರ ಸರ್ಕಾರದಿಂದ ಮಿತಿ.IndiGo Crisis: ಇಂಡಿಗೊ ಸಿಇಒ, ವ್ಯವಸ್ಥಾಪಕರಿಗೆ ಶೋಕಾಸ್ ನೋಟಿಸ್.IndiGo crisis: ಕಾರಿರುಳಲ್ಲಿ ಪರದಾಟ; ಚಾರ್ಜಿಂಗ್, ಪ್ಯಾಡ್ಗೂ ತತ್ವಾರ.IndiGo Crisis | ಪ್ರಯಾಣಿಕರ ಹಣ ಮರಳಿಸಲು ಬದ್ಧ: ಇಂಡಿಗೊ ಕ್ಷಮೆಯಾಚನೆ.IndiGo Crisis: ಮುಗಿಯದ ‘ಇಂಡಿಗೋ’ಳು; ಬಿಟ್ಟರು ರೈಲು.IndiGo Crisis: ದೆಹಲಿ, ಮುಂಬೈಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.