ನವದೆಹಲಿ: ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಟಿಕೆಟ್ ರದ್ದು ಮಾಡಲಾದ ಪ್ರಯಾಣಿಕರಿಗೆ, ಟಿಕೆಟ್ ದರದ ನಾಲ್ಕು ಪಟ್ಟು ಅಧಿಕ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮತ್ತು ಇಂಡಿಗೊ ಸಂಸ್ಥೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ.

‘ಇದೇ ವಿಚಾರದ ಬಗ್ಗೆ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ನಾವು ವಿಚಾರಣೆ ನಡೆಸುತ್ತಿದ್ದೇವೆ. ಆದ್ದರಿಂದ, ನಿಮ್ಮ ಮನವಿಯನ್ನು ವಿಚಾರಣೆ ಹಂತದಲ್ಲಿರುವ ಅರ್ಜಿಯ ಮೂಲಕವೇ ಮಾಡಿಕೊಳ್ಳಿ’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೊಡೇಲಾ ಅವರ ಪೀಠ ಹೇಳಿತು.

‘ಇಂಡಿಗೊ ಸಂಸ್ಥೆಯ ನೂರಾರು ವಿಮಾನಗಳು ರದ್ದಾಗಿ ಸೃಷ್ಟಿಯಾದ ಬಿಕ್ಕಟ್ಟಿಗೆ ಸಂಬಂಧಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ನಿರ್ಲಕ್ಷ್ಯ ಮತ್ತು ಲೋಪದ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಅರ್ಜಿಯಲ್ಲಿ ಮಾನವಿ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.