ಮುಂಬೈ: ದೆಹಲಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಂಡಿಗೊ ವಿಮಾನ ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ವಿಮಾನದ ಶೌಚಾಲಯದ ಬಳಿ ಪ್ರಯಾಣಿಕ ಗಗನಸಖಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಅಸಭ್ಯ ಕೃತ್ಯದಿಂದ ಬೇಸತ್ತ ಗಗನಸಖಿ ತನ್ನ ಸಿಬ್ಬಂದಿ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ವಿಮಾನ ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಅವರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಬಳಿಕ ಆ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಯಿತು ಎಂದು ಅವರು ತಿಳಿಸಿದ್ದಾರೆ.

ಆರೋಪಿಯನ್ನು ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತು. ಆತನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮದ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
.ಗಗನಸಖಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಜೈಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.