ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಟೇಕ್ ಆಪ್ ಆಗುವಾಗ ತುರ್ತು ನಿರ್ಗಮನ ದ್ವಾರ ತೆರೆದ ಪ್ರಯಾಣಿಕ!

Last Updated 17 ಜನವರಿ 2023, 13:03 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಬೋರ್ಡಿಂಗ್ ಪ್ರಕ್ರಿಯೆ ವೇಳೆ ಪ್ರಯಾಣಿಕನೊಬ್ಬ ಆಕಸ್ಮಿಕವಾಗಿ ಇಂಡಿಗೊ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದಿದ್ದು, ಇದು ಗಮನಕ್ಕೆ ಬಂದ ಕೂಡಲೇ ಎಂಜಿನಿಯರ್‌ಗಳು ಪರಿಶೀಲನೆ ನಡೆಸಿ ಅದನ್ನು ಸರಿಪಡಿಸಿದ್ದಾರೆ. ಬಳಿಕ ವಿಮಾನವು ತಿರುಚಿನಾಪಳ್ಳಿಗೆ ಹಾರಾಟ ನಡೆಸಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೋದ ವರ್ಷದ ಡಿಸೆಂಬರ್‌ 10 ರಂದು ಘಟನೆ ನಡೆದಿದೆ’ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.

‘6ಇ 7339 ಸಂಖ್ಯೆಯ ವಿಮಾನವು ಚೆನ್ನೈನಿಂದ ತಿರುಚಿನಾಪಳ್ಳಿಗೆ ಹೊರಡಲು ಸಿದ್ಧವಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ತುರ್ತು ನಿರ್ಗಮನ ದ್ವಾರ ತೆರೆದಿದ್ದರು. ಅದಕ್ಕಾಗಿ ತಕ್ಷಣವೇ ಕ್ಷಮೆಯನ್ನೂ ಕೋರಿದ್ದರು. ಬಳಿಕ ಎಂಜಿನಿಯರ್‌ಗಳು ಪರಿಶೀಲನೆ ನಡೆಸಿ ವಿಮಾನ ಹಾರಾಟಕ್ಕೆ ಹಸಿರು ನಿಶಾನೆ ತೋರಿದ್ದರು’ ಎಂದು ಇಂಡಿಗೊ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT