ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಂಡ್‌ವಿಚ್‌ನಲ್ಲಿ ಸ್ಕ್ರೂ ಪತ್ತೆ, ಫೋಟೊ ಹರಿದಾಟದ ಬಗ್ಗೆ ಇಂಡಿಗೊ ಹೇಳಿದ್ದೇನು?

Published 14 ಫೆಬ್ರುವರಿ 2024, 3:22 IST
Last Updated 14 ಫೆಬ್ರುವರಿ 2024, 3:22 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಗೊ ವಿಮಾನದಲ್ಲಿ ನೀಡಿದ ಸ್ಯಾಂಡ್‌ವಿಚ್‌ನಲ್ಲಿ ಸ್ಕ್ರೂ ಪತ್ತೆಯಾಗಿದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವನ್ನು ಹಂಚಿಕೊಂಡಿದ್ದಾರೆ.

ಫೆಬ್ರುವರಿ 1ರಂದು ಬೆಂಗಳೂರು-ಚೆನ್ನೈ ನಡುವೆ ಕಾರ್ಯನಿರ್ವಹಿಸುವ 6E-904 ವಿಮಾನದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಮಾನಯಾನ ಸಂಸ್ಥೆ, ‘ಒಂದು ವೇಳೆ ಪ್ರಯಾಣಿಕ ಮಾಡಿರುವ ಆರೋಪ ನಿಜವೇ ಆಗಿದ್ದಲ್ಲಿ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ಆದರೆ, ಸ್ಯಾಂಡ್‌ವಿಚ್‌ನಲ್ಲಿ ಸ್ಕ್ರೂ ಪತ್ತೆಯಾಗಿರುವ ಘಟನೆ ವರದಿಯಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಫೋಟೊದ ಬಗ್ಗೆ ಸ್ಪಷ್ಟತೆ ಇಲ್ಲ’ ಎಂದು ಹೇಳಿದೆ.

‘ನಮ್ಮ ವಿಮಾನದಲ್ಲಿ ಗುಣಮಟ್ಟದ ಊಟ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವುದಕ್ಕಾಗಿ ನುರಿತ ಸಿಬ್ಬಂದಿಯನ್ನು ನೇಮಿಸಲಾಗಿದೆ. ಮತ್ತಷ್ಟು ಮಾನದಂಡಗಳನ್ನು ಅನುಸರಿಸುವ ಮೂಲಕ ವಿಮಾನದಲ್ಲಿ ಪ್ರಯಾಣಿಕರಿಗೆ ಉತ್ತಮವಾದ ಅನುಭವವನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ’ ಎಂದು ಇಂಡಿಗೊ ಹೇಳಿಕೊಂಡಿದೆ.

ಜನವರಿ 2ರಂದು ಪ್ರಯಾಣಿಕರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ಫುಡ್ ಸೇಫ್ಟಿ ಆ್ಯಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ (ಎಫ್ಎಸ್ಎಸ್ಎಐ– ಫಸಾಯ್) ಇಂಡಿಗೊಕ್ಕೆ ಶೋಕಾಸ್ ನೋಟಿಸ್ ನೀಡಿತ್ತು.

ಇದಕ್ಕೂ ಮುನ್ನ ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳು ಪತ್ತೆಯಾಗಿರುವ ಬಗ್ಗೆ ಆರೋಪವೂ ಕೇಳಿ ಬಂದಿತ್ತು. ಡಿಸೆಂಬರ್ 29ರಂದು ದೆಹಲಿಯಿಂದ ಮುಂಬೈಗೆ 6E 6107 ವಿಮಾನದಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹಂಚಿಕೊಂಡ ಬಳಿಕ ಇಂಡಿಗೊ ಕ್ಷಮೆಯಾಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT