ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಗೊ: ಸ್ಯಾಂಡ್‌ವಿಚ್‌ನಲ್ಲಿ ಹುಳು ಪತ್ತೆ, ವಿಡಿಯೊ ಹರಿದಾಟ

Published 30 ಡಿಸೆಂಬರ್ 2023, 16:16 IST
Last Updated 30 ಡಿಸೆಂಬರ್ 2023, 16:16 IST
ಅಕ್ಷರ ಗಾತ್ರ

ನವದೆಹಲಿ: ನವದೆಹಲಿಯಿಂದ ಮುಂಬೈಗೆ ಶುಕ್ರವಾರ ಇಂಡಿಗೊ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ನೀಡಿದ ಸ್ಯಾಂಡ್‌ವಿಚ್‌ನಲ್ಲಿ ಹುಳು ಪತ್ತೆಯಾಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಖುಷ್ಬು ಗುಪ್ತಾ ಎಂಬುವರಿಗೆ ಇಂಡಿಗೊ ಸಿಬ್ಬಂದಿ ನೀಡಿದ ಸ್ಯಾಂಡ್‌ವಿಚ್‌ನಲ್ಲಿ ಹುಳು ಇತ್ತು. ಇದನ್ನು ವಿಡಿಯೊ ಚಿತ್ರೀಕರಿಸಿರುವ ಅವರು, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. 

‘ಹುಳು ಇರುವ ಬಗ್ಗೆ ನಾನು ವಿಮಾನದ ಸಿಬ್ಬಂದಿಯ ಗಮನಕ್ಕೆ ತಂದೆ. ಆದರೂ, ಅವರು ಉಳಿದ ಪ್ರಯಾಣಿಕರಿಗೆ ಸ್ಯಾಂಡ್‌ವಿಚ್‌ ನೀಡುವುದನ್ನು ಮುಂದುವರಿಸಿದರು’ ಎಂದು ಅವರು ಹೇಳಿದ್ದಾರೆ.

‘ವಿಮಾನಯಾನ ಸಂಸ್ಥೆಯು ತನ್ನ ಸಿಬ್ಬಂದಿಗೆ ಎಂತಹ ತರಬೇತಿ ನೀಡಿದೆ ಎಂಬುದು ನನಗೆ ಅಚ್ಚರಿ ತಂದಿದೆ. ಇಂತಹ ಆಹಾರ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾದರೆ ಹೊಣೆ ಯಾರು’ ಎಂದು ಪ್ರಶ್ನಿಸಿದ್ದಾರೆ.

‘ಹುಳು ಇರುವುದು ಗಮನಕ್ಕೆ ಬಂದ ತಕ್ಷಣವೇ ಸಿಬ್ಬಂದಿಯು ಸ್ಯಾಂಡ್‌ವಿಚ್‌ ವಿತರಣೆ ಸ್ಥಗಿತಗೊಳಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಸಂಸ್ಥೆಗೆ ಆಹಾರ ಪೂರೈಸುವವರ ಜೊತೆಗೂ ಚರ್ಚಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವಹಿಸುತ್ತೇವೆ. ಪ್ರಯಾಣಿಕರಿಗೆ ಆದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಇಂಡಿಗೊ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT