ನಾಗ್ಪುರ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಜಬಲ್‌ಪುರದಿಂದ ತೆಲಂಗಾಣದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನವನ್ನು ನಾಗ್ಪುರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘6E-7308 ಇಂಡಿಗೊ ವಿಮಾನವು ಜಬಲ್‌ಪುರದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದರಿಂದ ಕೂಡಲೇ ವಿಮಾನವನ್ನು ನಾಗ್ಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾವಣೆ ಮಾಡಲಾಯಿತು’ ಎಂದು ಇಂಡಿಗೊ ಏರ್‌ಲೈನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.