ನವದೆಹಲಿಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕ ಮ್ಯೂಸಿಯಂನಲ್ಲಿ ನಡೆದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು
ಪಿಟಿಐ ಚಿತ್ರ
ನವದೆಹಲಿಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕ ಮ್ಯೂಸಿಯಂನಲ್ಲಿ ನಡೆದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಇದ್ದರು
ಪಿಟಿಐ ಚಿತ್ರ
ಇಂದಿರಾ ಗಾಂಧಿ ಅಸಾಧಾರಣ ಸ್ಥೈರ್ಯ ಧೈರ್ಯವೇ ಮೈವೆತ್ತಿದ್ದ ವ್ಯಕ್ತಿಯಾಗಿದ್ದರು. ಅವರ 41ನೇ ಪುಣ್ಯತಿಥಿ ಈ ಸಂದರ್ಭದಲ್ಲಿ ದೇಶವೇ ಅವರಿಗೆ ನಮನ ಸಲ್ಲಿಸುತ್ತಿದೆ
ಜೈರಾಮ್ ರಮೇಶ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಇಂದಿರಾ ಗಾಂಧಿಯವರು ದೇಶದ ಸಮಗ್ರತೆ ಹಾಗೂ ಸಾರ್ವಭೌಮತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. 1984 ಅಕ್ಟೋಬರ್ 31ರಂದು ಭಾರತ ಅಪ್ರತಿಮ ನಾಯಕಿಯನ್ನು ಕಳೆದುಕೊಂಡಿತು
ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ತಮ್ಮ ದೂರದೃಷ್ಟಿ ಚತುರ ನಾಯಕತ್ವ ಕರ್ತೃತ್ವ ಶಕ್ತಿ ಮೂಲಕ ಭಾರತದ ಏಕತೆ ಮತ್ತು ಸಮಗ್ರತೆ ರಕ್ಷಿಸುವಲ್ಲಿ ಇಂದಿರಾ ಗಾಂಧಿ ಮಹತ್ವದ ಪಾತ್ರ ವಹಿಸಿದ್ದರು. ಸಶಕ್ತ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ