ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಬಳಿಕ ಭಾನುವಾರ ಪ್ರಧಾನಿ ನರೇಂದ್ರಯವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ರಕ್ಷಣಾ ಸಚಿವ ರಾಜನಾಥ ಸಿಂಗ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜಯಶಂಕರ್, ಅಜಿತ್ ದೋಬಲ್ ಸೇರಿ ಉನ್ನತ ಸರ್ಕಾರಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಪಾಕಿಸ್ತಾನ ಶನಿವಾರ ರಾತ್ರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಭಾರತ ಆರೋಪಿಸಿತ್ತು. ಕದನ ವಿರಾಮದ ಪರಿಸ್ಥಿತಿಯನ್ನು ಗಂಭೀರವಾಗಿ ಮತ್ತು ಜವಾಬ್ದಾರಿಯಾಗಿ ನಿಭಾಯಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತ ಪಾಕ್ಗೆ ಹೇಳಿತ್ತು.

ಸದ್ಯ ಗಡಿಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಶನಿವಾರ ರಾತ್ರಿಯಿಡೀ ಯಾವುದೇ ರೀತಿ ಶೆಲ್, ಡ್ರೋನ್ ದಾಳಿ ನಡೆದ ಬಗ್ಗೆ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.