ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಿಷನ್ ಆರೋಪ: ಪ್ರಿಯಾಂಕಾ ಅವರ 'ಎಕ್ಸ್' ಖಾತೆ ನಿರ್ವಾಹಕನ ವಿರುದ್ಧ ಎಫ್‌ಐಆರ್

Published 13 ಆಗಸ್ಟ್ 2023, 6:47 IST
Last Updated 13 ಆಗಸ್ಟ್ 2023, 6:47 IST
ಅಕ್ಷರ ಗಾತ್ರ

ಇಂದೋರ್: ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಪೋಸ್ಟ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲ್‌ನಾಥ್ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಅವರ 'ಎಕ್ಸ್' ಖಾತೆಯನ್ನು ನಿರ್ವಹಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ತಿಳಿಸಿದ್ದಾರೆ.

ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸ್ ನಾಯಕರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಶೇ 50 ಕಮಿಷನ್ ಆರೋಪ ಮಾಡಲಾಗಿತ್ತು.

ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರಲ್ಲಿ ನಕಲಿ ಪತ್ರ ಹರಡಲಾಗಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ನಿಮೇಶ್ ಪಾಠಕ್ ದೂರು ನೀಡಿದ್ದಾರೆ ಎಂದು ಇಂದೋರ್ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಶೇ 50ರಷ್ಟು ಕಮಿಷನ್‌ ನೀಡುವಂತೆ ರಾಜ್ಯದ ಗುತ್ತಿಗೆದಾರರನ್ನು ಕೇಳಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT