ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐಎನ್‌ಐ–ಸಿಇಟಿ: ಫಲಿತಾಂಶ ಘೋಷಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

Published 16 ಆಗಸ್ಟ್ 2024, 16:07 IST
Last Updated 16 ಆಗಸ್ಟ್ 2024, 16:07 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಸಾಲಿನ ‘ಐಎನ್‌ಐ ಸಂಯುಕ್ತ ಪ್ರವೇಶ ಪರೀಕ್ಷೆ’ (ಐಎನ್‌ಐ–ಸಿಇಟಿ) ಫಲಿತಾಂಶ ಘೋಷಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠ, ಈ ಕುರಿತ ಅರ್ಜಿಯ ವಿಚಾರಣೆ ನಡೆಸಿತು. ನಂತರ, ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತು.

‘ಇನ್‌ಸ್ಟಿಟ್ಯೂಟ್‌ ಆಫ್‌ ನ್ಯಾಷನಲ್‌ ಇಂಪಾರ್ಟನ್ಸ್‌’ (ಐಎನ್‌ಐ)ನ ಸ್ನಾತಕೋತ್ತರ ಕೋರ್ಸ್‌ಗಳ ಸೀಟು  ಹಂಚಿಕೆಗೆ ಸಂಬಂಧಿಸಿದ ಸಿಇಟಿ ಫಲಿತಾಂಶವನ್ನು ಪ್ರಕಟಿಸದಂತೆ ತಡೆ ನೀಡುವಂತೆ ಕೋರಿ ಡಾ.ಸುಕೃತಿ ನಂದ ಎಂ. ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲರಾದ ಪಿ.ಬಿ.ಸುರೇಶ್ ಹಾಘೂ ವಿಪಿನ್‌ ನಾಯರ್ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT