ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಶಿವಾಜಿ ಪ್ರತಿಮೆ ಸ್ಥಾಪನೆ ವಿಚಾರ - ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

Last Updated 20 ಮಾರ್ಚ್ 2022, 14:15 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಪಟ್ಟಣದಲ್ಲಿ ಭಾನುವಾರ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆ ವಿಚಾರವಾಗಿಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರತಿಭಟನೆ ನಡೆಸಿದ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಬಳಿಕ ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ ಪೊಲೀಸರು, ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು,ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕಲ್ಲು ತೂರಾಟದಲ್ಲಿ ಓರ್ವ ಕಾನ್‌ಸ್ಟೇಬಲ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಒಂದು ಗುಂಪು ಪ್ರತಿಮೆ ಸ್ಥಾಪಿಸಿದಾಗ ಮತ್ತೊಂದು ಗುಂಪು ಇದನ್ನು ವಿರೋಧಿಸಿತ್ತು. ಬಳಿಕ ಕಲ್ಲು ತೂರಾಟ ನಡೆಯಿತು. ಶಿವಾಜಿ ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT