ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಜ್ಯ ವನ್ಯಜೀವಿ ಕಳ್ಳಸಾಗಣೆ : 7 ಮಂದಿ ಬಂಧಿಸಿದ ಒಡಿಶಾ ಅರಣ್ಯಾಧಿಕಾರಿಗಳು

Published 8 ಏಪ್ರಿಲ್ 2024, 5:10 IST
Last Updated 8 ಏಪ್ರಿಲ್ 2024, 5:10 IST
ಅಕ್ಷರ ಗಾತ್ರ

ಭುವನೇಶ್ವರ: ಅಂತರರಾಜ್ಯ ವನ್ಯಜೀವಿಗಳ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಅಧಿಕಾರಿಗಳು ಐದು ಚಿರತೆ ಚರ್ಮಗಳು, ಫಿಶಿಂಗ್‌ ಕ್ಯಾಟ್‌, ಅಪಾರ ಪ್ರಮಾಣದಲ್ಲಿ ಪ್ಯಾಂಗೊಲಿನ್‌ಗಳು ಸೇರಿದಂತೆ ಅನೇಕ ವನ್ಯ ಜೀವಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಶಾಂತ್ ನಂದಾ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ಈ ದಂಧೆಯ ಕಿಂಗ್‌ಪಿನ್‌ ಅನ್ನು ಬಂಧಿಸುವ ನಿಟ್ಟಿನಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.

ಬಂಧಿತ ಆರೋಪಿಗಳನ್ನು ಗಜಪತಿ ಜಿಲ್ಲಾ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ ಎಂದು ನಂದಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT