ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಇತಿಹಾಸ, ಮಹತ್ವ

Published : 15 ಸೆಪ್ಟೆಂಬರ್ 2024, 4:46 IST
Last Updated : 15 ಸೆಪ್ಟೆಂಬರ್ 2024, 4:46 IST
ಫಾಲೋ ಮಾಡಿ
Comments

ಬೆಂಗಳೂರು: ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ  ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ.

ಮಹತ್ವ:

ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು, ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

ಇತಿಹಾಸ:

2007ರಲ್ಲಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಿತು. ಅಂದಿನಿಂದ ಜಾಗತಿಕವಾಗಿ ಪ್ರತಿ ವರ್ಷ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ.

1988ರಲ್ಲಿ ಹಲವು ಪ್ರಜಾಪ್ರಭುತ್ವ ಒಕ್ಕೂಟ ಸಂಸ್ಥೆಗಳು ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ‘ ಆಚರಣೆ ಮಾಡಬೇಕು ಎಂಬ ನಿರ್ಣಯ ಕೈಗೊಂಡವು. ನಂತರದ ದಿನಗಳಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆಗೆ ಕಳುಹಿಸಿಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT