ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

International Nurses Day: ನರ್ಸ್‌ಗಳ ಆರೋಗ್ಯ ಸೇವೆ ಅನುಕರಣೀಯ –ಪ್ರಧಾನಿ ಮೋದಿ

Last Updated 12 ಮೇ 2022, 7:54 IST
ಅಕ್ಷರ ಗಾತ್ರ

ನವದೆಹಲಿ:ಅಂತರರಾಷ್ಟ್ರೀಯ ದಾದಿಯರ ದಿನವಾದ ಇಂದು (ಮೇ 12) ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್‌ ಸಾಂಕ್ರಾಮಿಕ ಸಂದರ್ಭದಲ್ಲೂ ನರ್ಸ್‌ಗಳು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದಕ್ಕೆ ನರ್ಸ್‌ಗಳಿಗೆಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಆರೋಗ್ಯ ರಕ್ಷಣೆಯಲ್ಲಿ ನರ್ಸ್‌ಗಳುಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರ ಸಮರ್ಪಣೆ ಮತ್ತು ಸಹಾನುಭೂತಿ ಅನುಕರಣೀಯವಾಗಿದೆ. ಅತ್ಯಂತಸವಾಲಿನ ಸಂದರ್ಭಗಳಲ್ಲಿಯೂ ಸಹ ಅಸಾಧಾರಣ ಕೆಲಸ ಮಾಡುತ್ತಿರುವ ನರ್ಸ್‌ ಸಿಬ್ಬಂದಿಗಳಿಗೆ ಈ ಅಂತರರಾಷ್ಟ್ರೀಯದಿನನಂದುಕೃತಜ್ಞತೆಸಲ್ಲಿಸೋಣ ಎಂದು ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಆಧುನಿಕ ನರ್ಸಿಂಗ್ ವಿಜ್ಞಾನಕ್ಕೆ ಅನುಪಮ ಕೊಡುಗೆ ನೀಡಿದ ಶ್ರೇಷ್ಠ ದಾದಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನ ಮೇ 12. ಈ ದಿನವನ್ನು ಅಂತರರಾಷ್ಟ್ರೀಯ ದಾದಿಯರ ದಿನವನ್ನಾಗಿ ಜಗತ್ತಿನೆಲ್ಲೆಡೆ ಆಚರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT