ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

International Yoga Day: ಪ್ರಧಾನಿ ಮೋದಿ 'ಯೋಗ' ಕಾರ್ಯಕ್ರಮಕ್ಕೆ ಮಳೆ ಅಡ್ಡಿ

Published 21 ಜೂನ್ 2024, 2:18 IST
Last Updated 21 ಜೂನ್ 2024, 2:18 IST
ಅಕ್ಷರ ಗಾತ್ರ

ಶ್ರೀನಗರ: ಶ್ರೀನಗರದ ದಾಲ್‌ ಸರೋವರ ತೀರದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮಳೆ ಅಡ್ಡಿಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನಡೆಸಲಿರುವ ಯೋಗ ದಿನ ಕಾರ್ಯಕ್ರಮವು ಬೆಳಿಗ್ಗೆ 6.30ಕ್ಕೆ ನಿಗದಿಯಾಗಿತ್ತು.

ಕಾರ್ಯಕ್ರಮ ನಡೆಯಲಿರುವ 'ಶೇರ್‌ ಇ ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌' (ಎಸ್‌ಕೆಐಸಿಸಿ) ಬಳಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ.

ದಾಲ್‌ ಸರೋವರದ ಸುತ್ತಲೂ ಭಾರಿ ಮಳೆಯಾಗುತ್ತಿದೆ. ಕಣಿವೆಯಾದ್ಯಂತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗಾಗಿ, ಹೊರಾಂಗಣದಲ್ಲಿ ಕಾರ್ಯಕ್ರಮ ನಡೆಸುವುದು ಸವಾಲಿನ ಸಂಗತಿ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕೇಂದ್ರ ಆಯುಷ್ ಮಂತ್ರಾಲಯದ ಅಡಿಯಲ್ಲಿ ದೇಶದ ವಿವಿಧೆಡೆ ಯೋಗ ಕಾರ್ಯಕ್ರಮಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT