ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಆರೋಪ: ನಿತ್ಯಾನಂದ ವಿರುದ್ಧ ಬ್ಲೂ ಕಾರ್ನರ್ ನೋಟಿಸ್

Last Updated 22 ಜನವರಿ 2020, 13:20 IST
ಅಕ್ಷರ ಗಾತ್ರ

ಅಹಮದಾಬಾದ್: ಕರ್ನಾಟಕದಲ್ಲಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆಎಂದು ಗುಜರಾತ್ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಇಲ್ಲಿರುವ ಆತನ ಆಶ್ರಮದಿಂದ ಇಬ್ಬರು ಬಾಲಕಿಯರು ನಾಪತ್ತೆಯಾದ ಸಂಬಂಧನಿತ್ಯಾನಂದನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸ್ಥಳೀಯ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ ವೇಳೆ ಬ್ಲೂ ಕಾರ್ನರ್ ನೋಟಿಸ್ ಮಾಹಿತಿಯನ್ನು ಉಪಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಕಮರಿಯಾ ಬಹಿರಂಗ‍ಪಡಿಸಿದ್ದಾರೆ.

‘ನಿತ್ಯಾನಂದ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ನಾವು ಇಂಟರ್‌ಪೋಲ್‌ಗೆ ಮನವಿ ಮಾಡುತ್ತಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

ಅಪರಾಧ ಪ್ರಕರಣದಲ್ಲಿ ಬೇಕಾಗಿರುವವರ ಮಾಹಿತಿ ಪಡೆಯಲು ಅಥವಾ ಅವರನ್ನು ಪತ್ತೆ ಮಾಡಲು ಬ್ಲೂ ಕಾರ್ನರ್ ನೋಟಿಸ್ ಜಾರಿಮಾಡಲಾಗುತ್ತದೆ. ಪ್ರಕರಣದಲ್ಲಿ ಬೇಕಾಗಿರುವ ಅಪರಾಧಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT