ಮುಂಬೈ: ಮಹಾರಾಷ್ಟ್ರದ ಶಿವಸೇನಾ ನೇತೃತ್ವದ ಸರ್ಕಾರವು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಒಂದು ಅಧ್ಯಾಯವನ್ನು ಪರಿಚಯಿಸಬೇಕು ಎಂದು ಬಿಜೆಪಿ ಶಾಸಕ ಮಂಗಲ್ ಪ್ರಭಾತ್ ಲೋಧಾಮಂಗಳವಾರ ಬೇಡಿಕೆಯಿಟ್ಟಿದ್ದಾರೆ.

ಇದೊಂದು ಧಾರ್ಮಿಕ ಗ್ರಂಥ ಮಾತ್ರವಲ್ಲ, ಬದಲಿಗೆ ಜೀವನದ ಸಾರವನ್ನು ತಿಳಿಸುತ್ತದೆ ಎಂದೂ ಅವರು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಅವರು, ‘ಭಾರತದಾದ್ಯಂತ ಶಾಲಾ ಶಿಕ್ಷಣದಲ್ಲಿ ಗೀತೆಯನ್ನು ಅಳವಡಿಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ಗೀತೆಯನ್ನು ಪರಿಚಯಿಸುತ್ತದೆಯೇ? ಸರ್ಕಾರವು ಗೀತೆಯ ಒಂದು ಅಧ್ಯಾಯವನ್ನಾದರೂ ಶಿಕ್ಷಣದಲ್ಲಿ ಅಳವಡಿಸಲು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.

‘ಮಹಾರಾಷ್ಟ್ರದ ಶೈಕ್ಷಣಿಕ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು. ಈ ಬಗ್ಗೆ ಬೇಡಿಕೆ ಸಲ್ಲಿಸಿದ್ದೇನೆ’ ಎಂದು ಲೋಧಾ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ 2022–23ರ ಶೈಕ್ಷಣಿಕ ಸಾಲಿನಿಂದ ಭಗವದ್ಗೀತೆಯು 6–12ನೇ ತರಗತಿಯ ಪಠ್ಯಕ್ರಮದ ಭಾಗವಾಗಲಿದೆ ಎಂದು ಇಲ್ಲಿಯ ಬಿಜೆಪಿ ನೇತೃತ್ವದ ಸರ್ಕಾರ ಗುರುವಾರ ಘೋಷಿಸಿದೆ.ಕರ್ನಾಟಕ ಸರ್ಕಾರದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.