ನವದೆಹಲಿ: ಎರಡು ತಿಂಗಳ ಹಿಂದೆ ಗಡಿ ದಾಟಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಪ್ರಜೆ ಸೀಮಾ ಹೈದರ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 30 ವರ್ಷದ ಸೀಮಾ, ತನ್ನ ನಾಲ್ಕು ಮಕ್ಕಳ ಜೊತೆಗೆ ಗಡಿ ದಾಟಿ ನೇಪಾಳದ ಮೂಲಕ ಮೇ 13ರಂದು ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು.

‘ನಮಗೆ ಈ ಪ್ರಕರಣದ ಅರಿವಿದೆ. ಆಕೆ ಕೋರ್ಟ್ ಎದುರು ಹಾಜರಾಗಿದ್ದು, ಜಾಮೀನು ದೊರೆತಿದೆ. ಪ್ರಕರಣ ಈಗ ನ್ಯಾಯಾಲಯದಲ್ಲಿರುವ ಕಾರಣ ಹೆಚ್ಚು ಹೇಳಲು ಬಯಸುವುದಿಲ್ಲ‘ ಎಂದು ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.