ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಸಲಹಾ ಸಂಸ್ಥೆ ಐ–ಪ್ಯಾಕ್ನ ಕಚೇರಿಯಲ್ಲಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆಯನ್ನು ಇಂದು (ಬುಧವಾರ) ಮುಂದೂಡಿತು.
.ಸಂಪಾದಕೀಯ| ಐ–ಪ್ಯಾಕ್ ಮೇಲೆ ED ದಾಳಿ ನಿರೀಕ್ಷಿತ: ಮಮತಾ ಪ್ರತಿಕ್ರಿಯೆ ಅನಿರೀಕ್ಷಿತ.ಐ–ಪ್ಯಾಕ್ ಮೇಲೆ ED ದಾಳಿ: ಬಂಗಾಳ ಸರ್ಕಾರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.
ಜನವರಿ 8ರಂದು ಐ–ಪ್ಯಾಕ್ನ ಕಚೇರಿ ಹಾಗೂ ಸಂಸ್ಥೆಯ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ ಅವರು ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಅಲ್ಲಿದ್ದ ಪ್ರಮುಖ ಕಡತಗಳನ್ನು ಕೊಂಡೊಯ್ದಿದ್ದಾರೆ ಎಂದು ಇ.ಡಿ ಆರೋಪಿಸಿದೆ.

ಜಾರಿ ನಿರ್ದೇಶನಾಲಯದ ತನಿಖೆಗೆ ಅಡ್ಡಿಪಡಿಸಿರುವುದು ತುಂಬಾ ಗಂಭೀರವಾದ ವಿಚಾರ ಎಂದು ಜನವರಿ 15ರಂದು ಸುಪ್ರೀಂ ಕೋರ್ಟ್ ಹೇಳಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸರ್ಕಾರ ಮತ್ತು ಡಿಜಿಪಿ ರಾಜೀವ್ ಕುಮಾರ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು.

ಇದಲ್ಲದೆ ಪಶ್ಚಿಮ ಬಂಗಾಳದಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಇ.ಡಿ ದಾಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸುವಂತೆಯೂ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.