ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಟ್‌ಕ್ಲಬ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಐಪಿಎಸ್ ಅಧಿಕಾರಿ ಅಮಾನತು

Published 17 ಆಗಸ್ಟ್ 2023, 10:22 IST
Last Updated 17 ಆಗಸ್ಟ್ 2023, 10:22 IST
ಅಕ್ಷರ ಗಾತ್ರ

ನವದೆಹಲಿ: ಗೋವಾದ ನೈಟ್‌ ಕ್ಲಬ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಐಪಿಎಸ್ ಅಧಿಕಾರಿಯನ್ನು ಕೇಂದ್ರ ಗೃಹ ಇಲಾಖೆ ಅಮಾನತು ಮಾಡಿದೆ.

2009ರ ತಂಡದ ಐಪಿಎಸ್ ಅಧಿಕಾರಿಯಾದ ಇವರು ಅರುಣಾಚಲ ಪ್ರದೇಶ, ಗೋವಾ, ಮೀಜೊರಾಂ ಮತ್ತು ಕೇಂದ್ರಾಡಳಿತ ಪ್ರದೇಶ (AGMUT) ಕೇಡರ್‌ನ ಅಧಿಕಾರಿಯಾಗಿದ್ದರು. ಘಟನೆಯ ನಂತರ ಕೇಂದ್ರ ಗೃಹ ಇಲಾಖೆಯು ರಾಜ್ಯ ಸರ್ಕಾರದಿಂದ ವರದಿ ಕೇಳಿತ್ತು.

ವರದಿ ಆಧರಿಸಿ ಈ ಕ್ರಮವನ್ನು ಗೃಹ ಇಲಾಖೆ ಕೈಗೊಂಡಿದೆ. ಅಮಾನತು ಆದೇಶ ಜಾರಿಯಲ್ಲಿರುವವರೆಗೂ ಪೂರ್ವಾನುಮತಿ ಇಲ್ಲದೆ ಸ್ಥಳವನ್ನು ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.

ಡಿಐಜಿ ಕೇಡರ್‌ನ ಅಧಿಕಾರಿಯಾದ ಇವರನ್ನು ಆರಂಭದಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು.

ಆರೋಪ ಹೊತ್ತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾ ಫಾರ್ವರ್ಡ್ ಪಾರ್ಟಿಯ ಶಾಸಕ ವಿಜಯ್ ಸರ್ದೇಸಾಯಿ ಅವರು ಈ ವಿಷಯವನ್ನು ರಾಜ್ಯ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT