ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಇಕ್ಬಾಲ್ ಸಿಂಗ್ ಅವರನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ನಟ ದೀಪ್ ಸಿಧು ಅವರನ್ನು ಮಂಗಳವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಕೋರ್ಟ್ ಸಿಧು ಅವರನ್ನು 7 ದಿನಗಳವರೆಗೂ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ನಟ ದೀಪ್ ಸಿಧು ಸೇರಿದಂತೆ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡಿದವರಿಗೆ ₹1 ಲಕ್ಷ ಹಾಗೂ ಬೂಟಾ ಸಿಂಗ್, ಸುಖ್‌ದೇವ್ ಸಿಂಗ್, ಇಕ್ಬಾಲ್ ಸಿಂಗ್ ಮತ್ತು ಮತ್ತೊಬ್ಬ ಆರೋಪಿಗಳ ಪತ್ತೆಗಾಗಿ ಪೊಲೀಸರು ₹50,000 ನಗದು ಪುರಸ್ಕಾರ ಘೋಷಣೆ ಮಾಡಿದ್ದರು.
ಜನವರಿ 26 ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
Iqbal Singh, an accused in 26th January Delhi violence case arrested by Special Cell from Hoshiarpur, Punjab last night. He carried a reward of Rs 50,000 on his arrest: Delhi Police pic.twitter.com/T5ysMI4v77